ಹಾಸನ ಜಿಲ್ಲೆಯಲ್ಲಿಂದು 303 ಜನರಿಗೆ ಕೊರೊನಾ ಪಾಸೀಟೀವ್ ಧೃಡ ,411 ಜನ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆ, ಒಟ್ಟು 3 ಜನ ಸಸಾವನ್ನಪ್ಪಿದ್ದಾರೆ.
ಹಾಸನ,ಅ.04
( ಕರ್ನಾಟಕ ವಾರ್ತೆ):-
ಜಿಲ್ಲೆಯಲ್ಲಿಂದು ಕೊರೋನಾ ಸೋಂಕಿನಿಂದ 3 ಮಂದಿ ಮೃತರಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 350ಕ್ಕೆ ಏರಿಕೆಯಾಗಿದೆ. ಹೊಸದಾಗಿ 303 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 411 ಜನ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆ ,ಇದುವರೆಗೆ ಸೋಂ
ಕಿತರ ಸಂಖ್ಯೆ 18,226ಕ್ಕೆ ಏರಿಕೆಯಾಗಿದೆ.
ಜಿಲ್ಲಾಸ್ಪತ್ರೆಯಲ್ಲಿ 3,594 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ 14,282 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 51 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಪತ್ತೆಯಾದ 303 ಕೊರೋನಾ ಸೋಂಕು ಪ್ರಕರಣಗಳಲ್ಲಿ 49 ಮಂದಿ ಅರಸೀಕೆರೆ ತಾಲ್ಲೂಕಿನವರಾಗಿದ್ದು, 46 ಮಂದಿ ಚನ್ನರಾಯಪಟ್ಟಣ ತಾಲ್ಲೂಕಿನವರು, ಆಲೂರು ತಾಲ್ಲೂಕಿನಲ್ಲಿ 4 ಜನ, 117 ಮಂದಿ ಹಾಸನ ತಾಲ್ಲೂಕು, 11 ಜನ ಹೊಳೆನರಸೀಪುರ ತಾಲ್ಲೂಕು, 33 ಮಂದಿ ಅರಕಲಗೂಡು ತಾಲ್ಲೂಕು, ಬೇಲೂರು ತಾಲ್ಲೂಕಿನ 31 ಜನ ಹಾಗೂ ಸಕಲೇಶಪುರ ತಾಲ್ಲೂಕಿನಲ್ಲಿ 12 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಕೆ ಎಂ ಸತೀಶ್ ಕುಮಾರ್ ರವರು ತಿಳಿಸಿದ್ದಾರೆ.
*******
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ
Vimarsha.info