ವಿಷಯಕ್ಕೆ ಹೋಗಿ

ವಿಮರ್ಶಾ-ಸುದ್ದಿ ನೋಟ .15/11/2೦2೦

    
     



       ವಿಮರ್ಶಾ  -ಸುದ್ದಿ ನೋಟ
             15/11/2೦2೦





ತಜ್ಞರ ಸಲಹೆಯಂತೆ ದ್ವಾರಸಮುದ್ರ ಕೆರೆ ಏರಿ ದುರಸ್ತಿಗೆ ಕ್ರಮ: ಜೆ.ಸಿ ಮಾಧುಸ್ವಾಮಿ

ಹಾಸನ.ನ.14.

(ಕರ್ನಾಟಕ ವಾರ್ತೆ):- 


ದ್ವಾರಸಮುದ್ರ ಕೆರೆ ಏರಿ ದುರಸ್ತಿ ಕುರಿತಾಗಿ ಅಧಿಕಾರಿಗಳು ಈಗಾಗಲೇ ತಜ್ಞರ ಸಲಹೆ ಪಡೆದಿದ್ದು, ಅದರಂತೆ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದ್ದಾರೆ.

 ಬೇಲೂರು  ತಾಲ್ಲೂಕಿನ ದ್ವಾರಸಮುದ್ರ ಕೆರೆ ಏರಿ ಕುಸಿದಿರುವ ಸ್ಥಳ ವೀಕ್ಷಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಧ್ಯ ಕೆರೆ ಸಂಪೂರ್ಣವಾಗಿ ಭರ್ತಿಯಾಗಿರುವುದರಿಂದ ತಾತ್ಕಾಲಿಕವಾಗಿ ಕೆರೆ ಏರಿ ದುರಸ್ತಿ ಮಾಡಬಹುದಾಗಿದ್ದು, ಕೂಡಲೇ ಕೈಗೊಳ್ಳಬಹುದಾದ ದುರಸ್ತಿ ಕ್ರಮಗಳ ಬಗ್ಗೆ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

 ಸ್ಥಳೀಯ ಶಾಸಕರಾದ ಕೆ.ಎಸ್. ಲಿಂಗೇಶ್, ತಹಶೀಲ್ದಾರ್ ನಟೇಶ್, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ ಮತ್ತಿತರ ರೈತ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.
***********



ಹಾನಿಗೊಳಗಾಗಿರುವ ಕೆರೆಗಳ ದುರಸ್ಥಿಗೆ ಶೀಘ್ರ ಕ್ರಮವಹಿಸಿ: ಜೆ.ಸಿ. ಮಾಧುಸ್ವಾಮಿ
ಹಾಸನ.ನ.14

(ಕರ್ನಾಟಕ ವಾರ್ತೆ):- 

ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಎಲ್ಲಾ ಕೆರೆಗಳನ್ನು ತಾತ್ಕಾಲಿಕವಾಗಿ ದುರಸ್ಥಿ ಪಡಿಸಲು ಕ್ರಮವಹಿಸುವಂತೆ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

 ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಂದು ಜಿಲ್ಲೆಯಲ್ಲಿ ಮಳೆಯಿಂದಾಗಿರುವ ಸಣ್ಣ ನೀರಾವರಿ ಕೆರೆಗಳ ಪುನರುಜ್ಜೀವನದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ಮಳೆಯಿಂದ ಹಾನಿಯಾಗಿರುವ ಕೆರೆಗಳನ್ನು ದುರಸ್ಥಿಪಡಿಸುವಲ್ಲಿ ಬಾಕಿ ಉಳಿದಿರುವ ಕೆರೆಗಳ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ಮೂಲಕ ಕೆರೆಗಳ ಯತಾಸ್ಥಿತಿಯಲ್ಲಿ ಕಾಪಡುವಂತೆ ಅವರು ತಿಳಿಸಿದರು.

 ಜಿಲ್ಲೆಯಲ್ಲಿನ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲಿ ತಲಾ ಒಂದು ಕೆರೆಯನ್ನು ಆಯ್ಕೆ ಮಾಡಿ ಪ್ರೇಕ್ಷಣೀಯ ಹಾಗೂ ಪ್ರವಾಸಿ ತಾಣದಂತೆ ಅಭಿವೃದ್ಧಿ ಪಡಿಸಲು ಕ್ರಿಯಾ ಯೋಜನೆ, ಸಿದ್ದಪಡಿಸುವಂತೆ ಜೆ.ಸಿ. ಮಾಧುಸ್ವಾಮಿಯವರು ಅಧಿಕಾರಿಗಳಿಗೆ ಸೂಚಿಸಿದರು. 
 
 ಶಾಸಕರುಗಳಾದ ಕೆ.ಎಂ. ಶಿವಲಿಂಗೇಗೌಡ, ಎ.ಟಿ. ರಾಮಸ್ವಾಮಿ, ಹೆಚ್.ಕೆ. ಕುಮಾರಸ್ವಾಮಿ, ಕೆ.ಎಸ್. ಲಿಂಗೇಶ್ ಅವರು ಮಾತನಾಡಿ ಕೆರೆಗಳ ಏರಿ ಮತ್ತು ಹೆದ್ದಾರಿ ಪಕ್ಕದಲ್ಲಿರುವ ಕೆರೆಯಲ್ಲಿ ಜಾಲಿಮರಗಳು ಹೆಚ್ಚಾಗಿದ್ದು, ಅವುಗಳನ್ನು ತೆರೆವುಗೊಳಿಸಲು ಅಧಿಕಾರಿಗಳಿಗೆ ಆದೇಶಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.
 
 ಕೆರೆಗಳ ಏರಿ ಮತ್ತು ಹೆದ್ದಾರಿ ಪಕ್ಕದಲ್ಲಿರುವ ಕೆರೆಯಲ್ಲಿ ಜಾಲಿಮರಗಳನ್ನು ತೆರವುಗೊಳಿಸಲು ಹಾಗೂ ಕೆರೆಗಳ ಸ್ವಚ್ಚತೆಗೆ ಕ್ರಮ ಕೈಗೊಳ್ಳುವಂತೆ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು. 

 ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್‍ಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್, ಸರ್ಕಾರದ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿ ಮಥತ್ತುಂಜಯ ಸ್ವಾಮಿ, ಸೂಪರ್ಡೆಂಟ್ ಇಂಜಿನಿಯರ್ ರಾಜ್‍ಶೇಖರ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
**********


ಕೋವಿಡ್-19 ಕುರಿತ ವಿಶೇಷ ಜಾಗೃತಿ ಪ್ರಚಾರ ವಾಹನಕ್ಕೆ ಸಚಿವರಿಂದ ಚಾಲನೆ
ಹಾಸನ.ನ.14.

(ಕರ್ನಾಟಕ ವಾರ್ತೆ):- 


 ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ  ಹಮ್ಮಿಕೊಂಡಿರುವ ವಿಶೇಷ ಜಾಗೃತಿ ಪ್ರಚಾರ ವಾಹನಕ್ಕೆ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಂದು  ಚಾಲನೆ ನೀಡಿದರು.

 ಜಿಲ್ಲೆಯಲ್ಲಿ ಆಯ್ದ 180 ಹಳ್ಳಿಗಳಲ್ಲಿ ಕೋವಿಡ್-19 ಕುರಿತು ಅರಿವು ಮೂಡಿಸಲಾಗುತ್ತಿದೆ.

 ಇದೇ ಸಂದರ್ಭದಲ್ಲಿ ಶಾಸಕರುಗಳಾದ ಎ.ಟಿ. ರಾಮಸ್ವಾಮಿ, ಕೆ.ಎಂ.ಶಿವಲಿಂಗೇಗೌಡ,  ಹೆಚ್.ಕೆ. ಕುಮಾರಸ್ವಾಮಿ, ಕೆ.ಎಸ್. ಲಿಂಗೇಶ್ ಹಾಗೂ ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್‍ಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್ ಮತ್ತಿತರರು ಹಾಜರಿದ್ದರು.
*******



ಹಾಸನ ಜಿಲ್ಲೆಯ ಕೋವಿಡ್-19 ವರದಿ.
15/11/2೦2೦.



ಹಾಸನ ಜಿಲ್ಲೆಯಲ್ಲಿ ಇಂದು 26 ಜನರಿಗೆ ಕೊರೊನಾ ಪಾಸೀಟೀ಼ವ್ ಸೋಂಕು ದೃಢ. 
 ಇಂದು 2 ಸಾವು 
90 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ.
23 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


#ವಿಮರ್ಶಾ-vimarsha

An digital media

ಪ್ರಧಾನ ಸಂಪಾದಕರು

*ಹರೀಶ್ ಹೆಚ್ ಆರ್ ಕೋಟೆ*

ಸುದ್ದಿ ಸಂಪಾದಕರು

*ನಾಗೇಂದ್ರ. ಹೆಚ್.ಎನ್*

ಕಾಮೆಂಟ್‌ಗಳು