ವಿಷಯಕ್ಕೆ ಹೋಗಿ

ಜಿಲ್ಲೆಯಲ್ಲಿಂದು ಹೊಸದಾಗಿ 166 ಕೋವಿಡ್ ಪ್ರಕರಣಗಳು ಪತ್ತೆ ಹಾಸನ,ನ.04(ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿಂದು ಹೊಸದಾಗಿ 166 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 25,400ಕ್ಕೆ ಏರಿಕೆಯಾಗಿದೆ ಹಾಗೂ ಕೋವಿಡ್‍ನಿಂದ ಇಂದು ಇಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಮೃತಪಟ್ಟವರ ಸಂಖ್ಯೆ 432ಕ್ಕೆ ಏರಿಕೆಯಾಗಿದೆ. ಜಿಲ್ಲಾಸ್ಪತ್ರೆಯಲ್ಲಿ 1,110 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ 23,856 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 34 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಪತ್ತೆಯಾದ 114 ಕೊರೋನಾ ಸೋಂಕು ಪ್ರಕರಣಗಳಲ್ಲಿ 36 ಮಂದಿ ಚನ್ನರಾಯಪಟ್ಟಣ ತಾಲ್ಲೂಕಿನವರು, ಆಲೂರು ತಾಲ್ಲೂಕಿನ 13 ಮಂದಿ, 39 ಮಂದಿ ಹಾಸನ ತಾಲ್ಲೂಕು, 18 ಮಂದಿ ಹೊಳೆನರಸೀಪುರ ತಾಲ್ಲೂಕು, 13 ಮಂದಿ ಅರಕಲಗೂಡು ತಾಲ್ಲೂಕು, ಬೇಲೂರು ತಾಲ್ಲೂಕಿನ 11 ಮಂದಿ, ಸಕಲೇಶಪುರ ತಾಲ್ಲೂಕಿನ 12 ಮಂದಿ, ಅರಸೀಕೆರೆ ತಾಲ್ಲೂಕಿನ 24 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ತಿಳಿಸಿದ್ದಾರೆ. *********

ವಿಮರ್ಶಾ -vimarsha

ಕಾಮೆಂಟ್‌ಗಳು