ವಿಷಯಕ್ಕೆ ಹೋಗಿ

ವಿಮರ್ಶಾ -ಸುದ್ದಿ ನೋಟ

ನ. 20 ರಿಂದ ಬೆಂಬಲ ಬೆಲೆಯೊಂದಿಗೆ ಭತ್ತ ಖರೀದಿ ಪ್ರಕ್ರಿಯೆ ಪ್ರಾರಂಭ -ಹಾಸನ
ಜಿಲ್ಲೆಯಲ್ಲಿ ಬೆಂಬಲ ಬೆಲೆಯೊಂದಿಗೆ ಭತ್ತ ಖರೀದಿ ಪ್ರಕ್ರಿಯೆಯು ನ. 20 ರಿಂದ ಪ್ರಾರಂಭವಾಗಲಿದ್ದು 2021 ರ ಮಾ. 21 ರವರೆಗೂ ಇದಕ್ಕೆ ಅವಕಾಶ ಇದ್ದು, ಯಾವುದೇ ಲೋಪ ಇಲ್ಲದೆ ಈ ಪ್ರಕ್ರಿಯೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಬೆಂಬಲ ಬೆಲೆಯೊಂದಿಗೆ ಭತ್ತ ಖರೀದಿಗೆ ಸಂಬಂಧೀಸಿದಂತೆ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು ಬೆಂಬಲ ಬೆಲೆ ಯೋಜನೆಯಡಿ ಉತ್ತಮ ಗುಣಮಟ್ಟದ ಭತ್ತಕ್ಕೆ 1,888 ರೂ ಪ್ರತಿ ಕ್ವಿಂಟಾಲ್‍ಗೆ ನಿಗಧಿಯಾಗಿದ್ದು, ಕಡಿಮೆ ಗುಣಮಟ್ಟದ ಭತ್ತಕ್ಕೆ 1,868 ರೂ ನಿಗಧಿಯಾಗಿದೆ. ಭತ್ತವನ್ನು ನೀಡುವ ರೈತರಿಗೆ ಗರಿಷ್ಠ ಮೂರು ದಿನಗಳಲ್ಲಿ ವಿಳಂಬವಾಗದೆ ಅವರ ಖಾತೆಗೆ ಹಣ ವರ್ಗಾವಣೆಯಾಗುವಂತೆ ಕ್ರಮ ವಹಿಸಬೇಕು. ಈ ನಿಟ್ಟಿನಲ್ಲಿ ಅಗತ್ಯ ದಾಖಲಾತಿಗಳನ್ನು ಖರೀದಿಗೆ ಮುನ್ನವೇ ಸರಿಯಾಗಿ ಪರಿಶೀಲಿಸಿ ಪಡೆಯಿರಿ ಎಂದರು. ಬೆಂಬಲ ಬೆಲೆಯೊಂದಿಗೆ ಭತ್ತ ಖರೀದಿಗೆ ಸಾಕಷ್ಟು ದೀರ್ಘ ಸಮಯಾವಕಾಶ ಇದೆ. ರೈತರು ಯಾವುದೇ ಆತುರ ಮಾಡದೆ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ತಾವು ನೀಡುತ್ತಿರುವ ದಾಖಲಾತಿಗಳು ಸರಿಯಾಗಿವೆಯೇ ಎಂಬುದನ್ನು ಪರಿಶೀಲಿಸಿಕೊಂಡು ಫ್ರೂಟ್ಸ್ ಗುರುತಿನ ಚೀಟಿ ಪಡೆದು ಸರಿಯಾದ ಬ್ಯಾಂಕ್ ದಾಖಲಾತಿಗಳನ್ನು ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ತಿಳಿಸಿದರು. ಜಿಲ್ಲಾದ್ಯಂತ ಒಟ್ಟು 6 ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಅರಸೀಕೆರೆ ಹೊರತುಪಡಿಸಿ ಹಾಗೂ ಆಲೂರು ತಾಲ್ಲೂಕಿನ ಭತ್ತವನ್ನು ಹಾಸನ ಕೇಂದ್ರದಲ್ಲಿ ಖರೀದಿಸಲು ಆದೇಶ ಬಂದಿದೆ. ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕ್ಕಟ್ಟೆಯಲ್ಲಿ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು. ನ.30 ರಿಂದ ಭತ್ತ ಖರೀದಿಗೆ ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಅಷ್ಟರೊಳಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಸಿಬ್ಬಂದಿಗಳ ನೇಮಕ, ಅಕ್ಕಿ ಗಿರಣಿಗಳಲ್ಲಿ ಇರುವ ಹಲ್ಲಿಂಗ್ ಹಾಗೂ ಭತ್ತ ಸಂಗ್ರಹಣೆ ಸಾಮಥ್ರ್ಯ ವಿವರಗಳನ್ನು ಪಡೆದು ರೈತರಿಗೆ ಪ್ರಚಾರ ಕಾರ್ಯ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಡಿಸೆಂಬರ್ ತಿಂಗಳಲ್ಲಿ ಶೀತದ ವಾತಾವರಣ ಹೆಚ್ಚಾಗುವುದರಿಂದ ದಾಸ್ತಾನು ಹಾಳಾಗುವ ಸಂಭವವಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದರು. ಭತ್ತ ಖರೀದಿಯಲ್ಲಿ ಕೆಲವು ಷರತ್ತುಗಳಿದ್ದು, ಒಬ್ಬ ರೈತ ಗರಿಷ್ಠ 40 ಕ್ವಿಂಟಾಲ್ ಭತ್ತವನ್ನು ಮಾತ್ರ ಬೆಂಬಲ ಬೆಲೆ ಯೋಜನೆಯಲ್ಲಿ ನೀಡಬಹುದಾಗಿದೆ ಎಂದರಲ್ಲದೆ ಜಿಲ್ಲೆಯಲ್ಲಿ ಭತ್ತದ ಜೊತೆಗೆ ರಾಗಿ ಹಾಗೂ ಮೆಕ್ಕೆಜೋಳವನ್ನು ಹೆಚ್ಚಾಗಿ ಬೆಳೆಯಲಾಗುತ್ತಿದ್ದು, ಅವುಗಳಿಗೂ ಕೂಡ ಬೆಂಬಲ ಬೆಲೆ ನೀಡುವಂತೆ ಸರ್ಕಾರಕ್ಕೆ ಪ್ರಸ್ಥಾವನೆ ಸಲ್ಲಿಸಲು ಅವರು ಸೂಚಿಸಿದರು. ಬಿತ್ತಿ ಪತ್ರಗಳು, ದಿನಪತ್ರಿಕೆಗಳು ಹಾಗೂ ಮಾಧ್ಯಮಗಳಲ್ಲಿ ಈ ಯೋಜನೆಯ ಬಗ್ಗೆ ಹೆಚ್ಚು ಪ್ರಚಾರ ನೀಡಿ ಎಂದರಲ್ಲದೆ ರೈತರ ನೊಂದಣಿಗೆ ಬೇಕಾದ ಅಗತ್ಯ ದಾಖಲಾತಿಗಳ ಬಗ್ಗೆ ಎಲ್ಲರಿಗೂ ಮಾಹಿತಿ ನೀಡಿ ಎಂದರು. ಜಂಟಿ ಕೃಷಿ ನಿರ್ದೇಶಕರಾದ ರವಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರಾದ ಪುಟ್ಟಸ್ವಾಮಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಯೋಗೇಶ್, ಎ.ಪಿ.ಎಂ.ಸಿ ಕಾರ್ಯದರ್ಶಿ ಶ್ರೀಹರಿ ಹಾಗೂ ಮತ್ತಿತರರು ಸಭೆಯಲ್ಲಿ ಹಾಜರಿದ್ದರು. ********
ನ.12 ರಂದು ಚೆಸ್ಕಾಂ ಜನ ಸಂಪರ್ಕ ಸಭೆ-ಹಾಸನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಹಾಸನ ವಿಭಾಗದ ದುದ್ದ ಉಪವಿಭಾಗ ವ್ಯಾಪ್ತಿಯ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ನ.12 ರಂದು ಬೆಳಗ್ಗೆ 11 ಗಂಟೆಗೆ ಜನಸಂಪರ್ಕ ಸಭೆಯನ್ನು ದುದ್ದ ಉಪವಿಭಾಗ ಕಚೇರಿ ಸಂತೇಪೇಟೆ ಹಾಸನ, ಇಲ್ಲಿ ಹಾಗೂ ಕೆ.ಐ.ಎ.ಡಿ.ಬಿ ಉಪವಿಭಾಗದ ಜನಸಂಪರ್ಕ ಸಭೆಯನ್ನು ಅಂದು ಮದ್ಯಾಹ್ನ 03 ಗಂಟೆಗೆ ಕೆ.ಐ.ಎ.ಡಿ.ಬಿ ಉಪವಿಭಾಗ ಕಚೇರಿ ಸಂತೇಪೇಟೆ ಹಾಸನದಲ್ಲಿ ಕಾರ್ಯ ಮತ್ತು ಪಾಲನಾ ವೃತ್ತ ಅಧೀಕ್ಷಕ ಅಭಿಯಂತರರ ಅಧ್ಯಕ್ಷತೆಯಲ್ಲಿ, ಜನಸಂಪರ್ಕ ಸಭೆಯನ್ನು ಏರ್ಪಡಿಸಿದ್ದು ಗ್ರಾಹಕರು ವಿದ್ಯುಚ್ಛಕ್ತಿಗೆ ಸಂಬಂಧಪಟ್ಟ ಕುಂದುಕೊರತೆಗಳೇನಾದರೂ ಇದ್ದಲ್ಲಿ ಸಭೆಯಲ್ಲಿ ಬಗೆಹರಿಸಿಕೊಳ್ಳುವಂತೆ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ. **********
ನ.11 ರಂದು ಮಾಸಿಕ ಪ್ರಗತಿ ಪರಿಶೀಲನಾ ಸಭೆ:-ಹಾಸನ




ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ವೇತಾ ದೇವರಾಜ್ ಅವರ ಅಧ್ಯಕ್ಷತೆಯಲ್ಲಿ 2020-21ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(20 ಅಂಶಗಳನ್ನು ಒಳಗೊಂಡಂತೆ) ಅಕ್ಟೋಬರ್ 2020ರ ಮಾಹೆಯ ಅಂತ್ಯಕ್ಕೆ ಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ನ.11 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಮಟ್ಟದ ಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಮುಖ್ಯ ಯೋಜನಾಧಿಕಾರಿಯವರು ತಿಳಿಸಿದ್ದಾರೆ. **********
ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ:-ಹಾಸನ

 ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳುವ ಮತ್ತು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ. 2020-21ನೇ ಸಾಲಿಗೆ ಹಾಸನ ಜಿಲ್ಲಾ ಕಚೇರಿಯಲ್ಲಿ ಅಪ್ರೆಂಟಿಸ್ ತರಬೇತಿಗೆ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‍ಗೆ ಮಾಹೆಯಾನ 15000 ರೂ.ಗಳ ಸ್ಟೈಫಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು. ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು. ಅರ್ಜಿಯೊಂದಿಗೆ ಎಸ್. ಎಸ್. ಎಲ್.ಸಿ. ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಸಲ್ಲಿಸಲು ನವೆಂಬರ್ 20 ಕೊನೆಯ ದಿನವಾಗಿದೆ. ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬಿಎಂ ರಸ್ತೆ, ಹಾಸನ, ದೂರವಾಣಿ ಸಂಖ್ಯೆ 08172-295208ಗೆ ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಸಹಾಯಕ ನಿರ್ದೇಶಕರಾದ ವಿನೋದ್ ಚಂದ್ರ ಅವರು ತಿಳಿಸಿದ್ದಾರೆ. ************





ಜಿಲ್ಲೆಯಲ್ಲಿಂದು ಹೊಸದಾಗಿ 47 ಪ್ರಕರಣಗಳು ಪತ್ತೆ :-ಹಾಸನ  






ಜಿಲ್ಲೆಯಲ್ಲಿಂದು  ಹೊಸದಾಗಿ 47 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 25,925ಕ್ಕೆ ಏರಿಕೆಯಾಗಿದೆ. ಜಿಲ್ಲಾಸ್ಪತ್ರೆಯಲ್ಲಿ 873 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ 24,616 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 24 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಪತ್ತೆಯಾದ 47 ಕೊರೋನ ಸೋಂಕು ಪ್ರಕರಣಗಳಲ್ಲಿ ಇಬ್ಬರು ಚನ್ನರಾಯಪಟ್ಟಣ ತಾಲ್ಲೂಕಿನವರು, ಆಲೂರು ತಾಲ್ಲೂಕಿನ 5 ಮಂದಿ, 16 ಮಂದಿ ಹಾಸನ ತಾಲ್ಲೂಕು, ಇಬ್ಬರು ಹೊಳೆನರಸೀಪುರ ತಾಲ್ಲೂಕು, ಒಬ್ಬರು ಮಂದಿ ಅರಕಲಗೂಡು ತಾಲ್ಲೂಕು, ಬೇಲೂರು ತಾಲ್ಲೂಕಿನ 12 ಮಂದಿ, ಸಕಲೇಶಪುರ ತಾಲ್ಲೂಕಿನ 4 ಮಂದಿ, ಅರಸೀಕೆರೆ ತಾಲ್ಲೂಕಿನ 5 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ||ಕೆ ಎಂ ಸತೀಶ್ ಕುಮಾರ್ ತಿಳಿಸಿದ್ದಾರೆ .
ಪತ್ರಿಕೋದ್ಯಮ ಸ್ನಾತಕೋತ್ತರ ಪದವೀಧರರಿಗೆ ತರಬೇತಿಗಾಗಿ ಅರ್ಜಿ ಆಹ್ವಾನ-ಹಾಸನ ಕರ್ನಾಟಕ ಮಾಧ್ಯಮ ಅಕಾಡೆಮಿಯ 2020-21ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ (ಎಸ್.ಸಿ.ಪಿ./ ಟಿ.ಎಸ್.ಪಿ) ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಹಾಗೂ ವಿದ್ಯುನ್ಮಾನ ಮಾಧ್ಯಮ ಸ್ನಾತಕೋತ್ತರ ಪದವೀಧರರಿಗೆ ವೃತ್ತಿಯಲ್ಲಿ ಉತ್ತಮ ಕಾರ್ಯನಿರ್ವಹಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮೂರು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಪರಿಶಿಷ್ಟ ಜಾತಿಯ 25 ಮಂದಿ ಹಾಗೂ ಪರಿಶಿಷ್ಟ ಪಂಗಡದ 10 ಮಂದಿ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರಿಕಾಲಯ/ವಾಹಿನಿಗಳಲ್ಲಿ ತರಬೇತಿ ನೀಡಿ ಮಾಹೆಯಾನ 15,000 ರೂ. ಗಳ ಸ್ಟೈಫಂಡ್ ನೀಡಲಾಗುವುದು. ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿದ್ದು ಕನ್ನಡ ಭಾಷೆಯಲ್ಲಿ ಪರಿಣಿತರಾಗಿರಬೇಕು. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು. ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರಗಳೊಂದಿಗೆ ಜಾತಿ ಪ್ರಮಾಣ ಪತ್ರ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರೆ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಇ-ಮೇಲ್ ವಿಳಾಸ traineekma2020@gmail.com ಮೂಲಕ ಅಥವಾ ಅಂಚೆ ಮೂಲಕ ನ.27ರ ಒಳಗೆ ತಲುಪುವಂತೆ ಕಳುಹಿಸಬೇಕು. ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ಯಾವುದೇ ಸರ್ಕಾರಿ ಇಲಾಖೆ/ಸಂಸ್ಥೆಗಳಲ್ಲಿ ಫಲಾನುಭವಿಗಳಾಗಿದ್ದರೆ ಅಂತಹವರು ಅರ್ಜಿ ಸಲ್ಲಿಸುವಂತಿಲ್ಲ. ಸರ್ಕಾರದಿಂದ ಈಗಾಗಲೇ ಸೌಲಭ್ಯ ಪಡೆದ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದಲ್ಲಿ ಅವರ ಅರ್ಜಿಯನ್ನು ತಿರಸ್ಕರಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ಹೂಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22860164 ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು-560001 ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿಗಳಾದ ಸಿ. ರೂಪಾ ಅವರು ತಿಳಿಸಿದ್ದಾರೆ. ************ ಕೃಪೆ:-ಕರ್ನಾಟಕ ವಾರ್ತೆ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ರೈತ ದಿನ ಆಚರಣೆ-ಸಾವಯವ ಕೃಷಿ ಪದ್ಧತಿಗೆ ಸಲಹೆ.

👇👇👇👇👇👇👇👇👇👇👇👇👇 ರೈತ ದಿನಾಚರಣೆ https://youtube.com/shorts/EGX4c_IVzY8?si=erkB19_6MH0KmBG6 ಮೊಸಳೆಹೊಸಹಳ್ಳಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ರಾಷ್ಟ್ರೀಯ ರೈತರ ದಿನದ ಅಂಗವಾಗಿ ಸಾವಯವ ಕೃಷಿ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಪುಣ್ಯಭೂಮಿ ಪರಿಸರ ಪ್ರಶಸ್ತಿ ಮತ್ತು ಶ್ರೇಷ್ಠ ಕೃಷಿಕ ಪ್ರಶಸ್ತಿ ಪುರಸ್ಕೃತರಾದ ಕಟ್ಟಾಯ ಹೋಬಳಿಯ ಬ್ಯಾಡರಹಳ್ಳಿಯ ಸಾವಯವ ಕೃಷಿಕರು, ಪ್ರಗತಿಪರ ರೈತರು ಮತ್ತು ಪಾರಂಪರಿಕ ವೈದ್ಯರಾದ ಶ್ರೀಯುತ ರವಿಶಂಕರ್ ಅವರು ಆಗಮಿಸಿದ್ದರು. ಸಂಸ್ಥೆಯಲ್ಲಿ ರೈತರಿಂದ ಗಿಡ ನೆಡುವುದರ ಮೂಲಕ ರೈತರ ದಿನವನ್ನು ಉದ್ಘಾಟಿಸಲಾಯಿತು. ಸಾವಯವ ಕೃಷಿಯನ್ನು ಉದ್ದೇಶಿಸಿ ಮಾತನಾಡಿದ ಇವರು ವಿದ್ಯಾರ್ಥಿಗಳಿಗೆ ಸಾವಯವ ಕೃಷಿಯ ಕ್ರಮಗಳು, ಆರೋಗ್ಯಕರ ಪ್ರಯೋಜನಗಳನ್ನು ವಿವರಿಸುತ್ತಾ, ಬೆಳೆಗೆ ಯಾವುದೇ ರಾಸಾಯನಿಕ ಗೊಬ್ಬರಗಳು, ಕೀಟನಾಶಕಗಳನ್ನು ಬಳಸದೇ ಕೇವಲ ಹಸುವಿನ ಸಗಣಿ ಮತ್ತು ಗಂಜುಳದಿಂದ ರಸಗೊಬ್ಬರ ಮತ್ತು ಸಾವಯವ ಕೀಟನಾಶಕವನ್ನು ತಯಾರಿಸಿ ಮಣ್ಣಿನ ಫಲವತ್ತತೆಯನ್ನು ಹೇಗೆ ಹೆಚ್ಚಿಸುವುದು ಮತ್ತು ಯಾವ ಕಾಲ, ನಕ್ಷತ್ರ, ಹವಾಮಾನ ಮತ್ತು ಮಾಸಕ್ಕನುಗುಣವಾಗಿ ಯಾವ ಬೆಳೆ ಬೆಳೆಯಬೇಕೆಂಬುದನ್ನು ರೈತರು ಸೂಕ್ತವಾಗಿ ಅರಿತಿರಬೇಕು ಮತ್ತು ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಗೊಳಿಸಿಕೊಳ್ಳ

ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನ ಆಚರಣೆ.

ಹಾಸನ ತಾಲ್ಲೂಕಿನ ಮೊಸಳೆಹೊಸಹಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕದ ವತಿಯಿಂದ ರೆಡ್ ರಿಬ್ಬನ್ ಕ್ಲಬ್ ಸಹಯೋಗದೊಂದಿಗೆ, ವಿಶ್ವ ಏಡ್ಸ್ ದಿನದ ಪ್ರಯುಕ್ತ ಸಂಸ್ಥೆಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.. . ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಾಸನ ಜಿಲ್ಲಾ ಏಡ್ಸ್ ಪ್ರಿವೆನ್ಷನ್ ಮತ್ತು ಕಂಟ್ರೋಲ್ ಘಟಕದ ಸೂಪರ್ವೈಸರ್ ಶ್ರೀಯುತ ರವಿಕುಮಾರ್ ವಿ. ಬಲ್ಲೇನಹಳ್ಳಿ ಯವರು ಮತ್ತು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀಯುತ ನಾಗೇಶ್ ರವರು ಹೆಚ್.ಐ.ವಿ. ಸೋಂಕಿನ ಬಗ್ಗೆ ವಿದ್ಯಾರ್ಥಿಗಳಿಗೆ ಸಂಕ್ಷಿಪ್ತ ಮಾಹಿತಿ ನೀಡುವ ಮೂಲಕ ಜಾಗೃತಿ ಮೂಡಿಸಿದರು.  ಮುಂದುವರೆದು ಸಂಸ್ಥೆಯಲ್ಲಿ ಏಡ್ಸ್/ಹೆಚ್.ಐ.ವಿ. ಸೋಂಕಿನ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸವಾಗಿ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಪೋಸ್ಟರ್ ಡಿಸೈನ್ ಮತ್ತು ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು ಮತ್ತು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು ಸಂಸ್ಥೆಯ ಎನ್.ಎಸ್.ಎಸ್. ಅಧಿಕಾರಿಗಳಾದ ಶ್ರೀಯುತ ವೀರಭದ್ರಸ್ವಾಮಿ ಕೆ.ಎಂ. ರವರು, ಎನ್.ಎಸ್.ಎಸ್. ಚಟುವಟಿಕೆಯ ಅಡಿಯಲ್ಲಿ ವಿದ್ಯಾರ್ಥಿಗಳು ಸುತ್ತಮುತ್ತಲ, ಮೂರು ಗ್ರಾಮಗಳನ್ನು ದತ್ತು ಪಡೆದು ಸ್ವಚ್ಛತೆ, ಆರೋಗ್ಯ, ಉನ್ನತ ಶಿಕ್ಷಣ ಮುಂತಾದ ವಿಷಯಗಳ ಬಗ್ಗೆ ಜಾಗೃತಿ

ಹಾಸನ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗಾವಕಾಶಗಳು.

ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ನೆಲೆಸಿರುವ ಗೃಹಿಣಿಯರು, ನಿವೃತ್ತ ಅಧಿಕಾರಿಗಳು /ನೌಕರರು ಮತ್ತು ನಿರುದ್ಯೋಗಿಗಳಿಗೆ ಆರ್ಥಿಕ ವಲಯದಲ್ಲಿ ಹೂಡಿಕೆ ಇಲ್ಲದೆ ವೃತ್ತಿ ಅವಕಾಶಗಳು / ವ್ಯಾಪಾರ ಅವಕಾಶಗಳು  ಪುರುಷ ಮತ್ತು  ಮಹಿಳೆಯರಿಗೆ   ವಯಸ್ಸಿನ ಮಿತಿ: - 25 ರಿಂದ 65 ವರ್ಷಗಳು.  ದಯವಿಟ್ಟು ನಿಮ್ಮ ವಿವರಗಳನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ.  freelanceadvertisingthassan@gmail.com  ಅಥವಾ  ಸಂಪರ್ಕಿಸಿ  7090899728 Career opportunities /business opportunities with out an investments in financial sector for housewives ,retired officials /employees and unemployed persons residing in Hassan district, Karnataka state India For both male and female. Age limit:- 25 to 65 years. Please send your details to below email id. freelanceadvertisingathassan@gmail.com Or  Contact  070908 99728