ವಿಷಯಕ್ಕೆ ಹೋಗಿ

ವಿಮರ್ಶಾ -ಸುದ್ದಿ ನೋಟ

ನವೆಂಬರ್ 19 ರಿಂದ ವಿದ್ಯುತ್ ಹರಿಸಲಾಗುವುದು,ವಿದ್ಯುತ್ ಗೋಪುರ ಹತ್ತದಂತೆ ಎಚ್ಚರಿಕೆ 

ಹಾಸನ

(ಕರ್ನಾಟಕ ವಾರ್ತೆ): 

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರೀನಿವಾಸಪುರದಲ್ಲಿರುವ ಮೆ|| ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯಿಂದ 220/66/11 ಕೆ.ವಿ ಸ್ವೀಕರಣಾ ಕೇಂದ್ರಕ್ಕೆ ವಿದ್ಯುತ್ ರವಾನೆ ಮಾಡಲು220/66/11 ಕೆ.ವಿ ಯಾಚೇನಹಳ್ಳಿ ಸ್ವೀಕರಣಾ ಕೇಂದ್ರದಿಂದ ನೂತನವಾಗಿ 66 ಕೆ.ವಿ ವಿದ್ಯುತ್ ಮಾರ್ಗವನ್ನು ಸ್ವಯಂ ನಿರ್ಮಾಣ ಯೋಜನೆಯಡಿಯಲ್ಲಿ ನಿರ್ಮಾಣ ಮಾಡಲಾಗಿದ್ದು,
 ಸದರಿ ವಿದ್ಯುತ್ ಮಾರ್ಗದಲ್ಲಿ ನ. 19 ರಂದು ಅಥವಾ ನಂತರ ದಿನಗಳಲ್ಲಿ 66ಕೆವಿ ವಿದ್ಯುತ್‍ನ್ನು ಹರಿಸಲಾಗುವುದು ಆದ್ದರಿಂದ ಸಾರ್ವಜನಿಕರು ಈ ಮಾರ್ಗದ ವಿದ್ಯುತ್ ಗೋಪುರವನ್ನು ಹತ್ತುವುದಾಗಲಿ, ಅವುಗಳಿಗೆ ದನ-ಕರುಗಳನ್ನು ಕಟ್ಟುವುದಾಗಲಿ, ಹಸಿರು ಬಳ್ಳಿ ಅಥವಾ ಲೋಹದ ತಂತಿಗಳನ್ನು ಎಸೆಯುವುದಾಗಲಿ ಮಾಡಬಾರದು. ಇದರಿಂದ ಸಾರ್ವಜನಿಕರ ಆಸ್ತಿ-ಪಾಸ್ತಿ ಮತ್ತು ಪ್ರಾಣಕ್ಕೆ ಹಾನಿಯಾಗುವ ಸಂಭವವಿರುತ್ತದೆ. ವಿದ್ಯುತ್ ಪ್ರಸರಣ ಮಾರ್ಗಗಳ ಕೆಳಭಾಗದಲ್ಲಿ ಯಾವುದೇತರಹದ ಚಟುವಟಿಕೆಗಳನ್ನು ಮಾಡಬಾರದಾಗಿ ಹಾಗೂ ವಿದ್ಯುತ್ ಮಾರ್ಗದ 18 ಮೀಟರ್ ಕಾರಿಡಾರ್ ಅಡಿಯಲ್ಲಿ ಯಾವುದೇ ರೀತಿಯ ಕಟ್ಟಡಗಳನ್ನು ಕಟ್ಟುವುದಾಗಲಿ ಅಥವಾ ಮರಗಳನ್ನು ಬೆಳೆಸುವುದಾಗಲಿ ಮಾಡಬಾರದು ಹಾಗೂ ಯಾವುದೇ ತರಹದ ದುಷ್ಕøತ್ಯಗಳಿಗೆ ಒಳಗೊಂಡ ಅಪಘಾತ ಅಥವಾ ಹಾನಿ ಸಂಭವಿಸಿದರೆ ಅವರೇ ಜವಾಬ್ಧಾರರಾಗಿರುತ್ತಾರೆ ಎಂದು ಈ ಪ್ರಕಟಣೆ ಮೂಲಕ ಸಾರ್ವಜನಿಕರಿಗೆ ತಿಳಿಯಪಡಿಸುತ್ತಿದ್ದೇವೆ. ಸಾರ್ವಜನಿಕರ ಬೇಜವಾಬ್ದಾರಿಯಿಂದ ಆಗುವ ಅನಾಹುತಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಜವಾಬ್ದಾರಿಯಾಗಿರುವುದಿಲ್ಲ. ಎಂದು ಕವಿಪ್ರನಿನಿ, ಬೃ.ಕಾ.ವಿ, ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರು ತಿಳಿಸಿದ್ದಾರೆ.
*****



2 ಹಂತಗಳಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ಸಿದ್ಧತೆಗೆ ಚುನಾವಣಾ ಆಯೋಗ ಸೂಚನೆ



(ಕರ್ನಾಟಕ ವಾರ್ತೆ):- 

ಮುಂದಿನ ಮೂರು ವಾರಗಳಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ಘೋಷಿಸಲು ಉಚ್ಛ ನ್ಯಾಯಾಲಯ ಆದೇಶಿಸಿದ್ದು, ಕೋವಿಡ್ ಪರಿಸ್ಥಿತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಜಿಲ್ಲೆಗಳಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಸಲು ಸೂಕ್ತ ಸಿದ್ಧತೆ ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಡಾ.ಬಿ. ಬಸವರಾಜು ಅವರು ಸೂಚಿಸಿದ್ದಾರೆ.
 ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಮಾತನಾಡಿದ ಅವರು ಕೋವಿಡ್ ಹಿನ್ನೆಲೆಯಲ್ಲಿ ಹೆಚ್ಚು ಜನಸಂದಣಿಯಾಗದಂತೆ ಹಾಗೂ ಸಿಬ್ಬಂದಿಗಳ ಕೊರತೆಯಾಗದಂತೆ ಯೋಜಿಸಿ 2 ಹಂತಗಳಲ್ಲಿ ಚುನಾವಣೆ ನಡೆಸಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
 ಕೊರೋನಾ ಸಂದರ್ಭದಲ್ಲಿ ಚುನಾವಣೆ ನಡೆಸುವುದೇ ಒಂದು ರೀತಿಯ ಸವಾಲಾಗಿದೆ. ಆದರೆ ಗ್ರಾಮ ಪಂಚಾಯ್ತಿಯು ಪ್ರಜಾ ಪ್ರಭುತ್ವದ ಮೂಲ ಅಡಿಪಾಯವಾಗಿದೆ. ಹಾಗಾಗಿ ಎಲ್ಲಾ ಸೂಕ್ಷ್ಮ ವಿಷಯಗಳ ಮೇಲೂ ಹೆಚ್ಚಿನ ಗಮನಹರಿಸಿ, ಯಾವುದೇ ಲೋಪಗಳಿಲ್ಲದಂತೆ ನ್ಯಾಯಯುತವಾಗಿ ಚುನಾವಣೆ ನಡೆಸಲು ಪ್ರತಿಯೊಬ್ಬರೂ ಜವಾಬ್ದಾರಿ ವಹಿಸಬೇಕು ಎಂದರು.
 ಚುನಾವಣೆ ಸಂದರ್ಭದಲ್ಲಿ ಹೆಚ್ಚಿನ ಜನಸಂದಣಿಯಾಗುವುದನ್ನು ತಪ್ಪಿಸಲು 1000 ಅಧಿಕ ಮತದಾರರನ್ನು ಒಳಗೊಂಡ ಮತಗಟ್ಟೆಗೆ ಹೆಚ್ಚುವರಿ ಕೊಠಡಿಯಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಿ ಎಂದರಲ್ಲದೆ, ಮತಗಟ್ಟೆಗಳನ್ನು ಕಡ್ಡಾಯವಾಗಿ ಸ್ಯಾನಿಟೈಸ್ ಮಾಡುವುದರ ಜೊತೆಗೆ ಮತದಾರರಿಗೆ ಕೋವಿಡ್ ಮುಂಜಾಗ್ರತಾ ಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕು. ಆದರೆ ಯಾವುದೇ ಕಾರಣಕ್ಕೂ ಮತದಾನದ ಸಂಖ್ಯೆಯಲ್ಲಿ ಇಳಿಕೆಯಾಗಬಾರದು ಎಂದು ಅವರು ಹೇಳಿದರು.
 ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು ಉಪ ವಿಭಾಗಾಧಿಕಾರಿ ಮಟ್ಟದಲ್ಲಿ ಆಯ್ಕೆ ಮಾಡಿ ಅವರಿಗೆ ಸೂಕ್ತ ತರಬೇತಿ ನೀಡಬೇಕು. ಹಾಗೂ ಚುನಾವಣೆ ಸಂದರ್ಭದಲ್ಲಿ ಕೋವಿಡ್ ಸೋಂಕಿತ ವ್ಯಕ್ತಿಯು ಮತ ಚಲಾವಣೆಯನ್ನು ಅಂಚೆ ಮತ ಪತ್ರದ ಮೂಲಕ ಮಾಡುವುದೋ ಅಥವಾ ಪಿ.ಪಿ.ಇ ಕಿಟ್ ಧರಿಸಿ ತಾನೇ ಖುದ್ದಾಗಿ ಮತ ಚಲಾವಣೆ ಮಾಡುವುದೋ ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ದೇಶನ ನೀಡಲಾಗುವುದು ಎಂದು ಆಯುಕ್ತರು ತಿಳಿಸಿದರು.
ಮಾಧ್ಯಮದವರು ಹಾಗೂ ಸಂಘ ಸಂಸ್ಥೆಗಳು ಚುನಾವಣೆ ಸಂದರ್ಭದಲ್ಲಿ ನಿಸ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಿಬೇಕು. ಅವುಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವನ್ನು ಜಿಲ್ಲಾಡಳಿತ ಮಾಡುವುದರ ಜೊತೆಗೆ, ಚುನಾವಣಾ ಆಯೋಗಕ್ಕೆ ಇದರ ಬಗ್ಗೆ ವರದಿ ನೀಡಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕ ಅಧಿಕಾರಿಗಳು ಮತಗಟ್ಟೆಗಳ ದುರಸ್ಥಿ ಕಾರ್ಯವನ್ನು ಮಾಡಿಸಬೇಕು. ಜೊತೆಗೆ ಮತಗಟ್ಟೆಗಳಲ್ಲಿ ಅಂತರ್ಜಾಲ ಸೌಲಭ್ಯ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಯಾ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಬೇಕು ಎಂದರು.
ಇದರ ಜೊತೆಗೆ ಮತಗಟ್ಟೆಗಳನ್ನು ಸ್ಯಾನಿಟೈಸ್ ಮಾಡಿಸುವುದು, ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದು ಹಾಗೂ ಮತದಾರರಿಗೆ ಸೂಕ್ತ ಪ್ರಚಾರ ನೀಡುವುದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದು ಆಯುಕ್ತರು ತಿಳಿಸಿದರು.
 ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಚುನಾವಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಅಗತ್ಯ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಬೇಕು. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಿ ಅವುಗಳಿಗೆ ಅಗತ್ಯ ಬಂದೋಬಸ್ತ್ ಕಲ್ಪಿಸಬೇಕು. ಚುನಾವಣೆ ಸಂದರ್ಭದಲ್ಲಿ ಹಣ, ಸಾಮಾಗ್ರಿಗಳು ಹಾಗೂ ಅಕ್ರಮ ಮದ್ಯ ವಿತರಣೆಯಾಗದಂತೆ ಅಬಕಾರಿ ಇಲಾಖೆಯ ಸಹಯೊಗದೊಂದಿಗೆ ಅಗತ್ಯ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಚುನಾವಣೆಗೆ ಅಗತ್ಯ ಅನುದಾನವನ್ನು ಒದಗಿಸಲಾಗುತ್ತಿದ್ದು, ಅದನ್ನು ಮಿತವಾಗಿ ವಿನಿಯೋಗ ಮಾಡಿ, ವಿನಿಯೊಗ ಮಾಡಿದ ಅನುದಾನದ ವಿವರವನ್ನು ಕಡ್ಡಾಯವಾಗಿ ಆಯೋಗಕ್ಕೆ ನಿಗದಿತ ಸಮಯದೊಳಗೆ ನೀಡಬೇಕು ಎಂದರಲ್ಲದೆ, ಚುನಾವಣೆ ಮುಗಿಯುವವರೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಯಾವುದೇ ಅಧಿಕಾರಿ ರಜೆ ಅಥವಾ ಕೇಂದ್ರ ಸ್ಥಾನ ಬಿಟ್ಟು ಹೋಗುವ ಹಾಗಿಲ್ಲ ಎಂದು ಚುನಾವಣಾ ಆಯೋಗದ ಆಯುಕ್ತರು ತಿಳಿಸಿದರು.
ಸಭೆಯಲ್ಲಿ ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಹೊನ್ನಾಂಬ, ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್, ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಚುನಾಚಣೆ ತಹಶೀಲ್ದಾರ್ ಹೆಚ್.ಟಿ ಪದ್ಮನಾಭಶಾಸ್ತ್ರಿ ಹಾಗೂ ಮತ್ತಿತರರು ಹಾಜರಿದ್ದರು.

**********
ಹಾಸನ ಜಿಲ್ಲೆಯ ಕೋವಿಡ್-19 ವರದಿ:-
18/11/2020.

ಜಿಲ್ಲೆಯಲ್ಲಿ ಒಟ್ಟು 71 ಕೊರೊನಾ ಪಾಸೀಟೀವ್ ಸೋಂಕಿತರ ಪತ್ತೆ.

ಇಂದು 46ಮಂದಿ  ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರಯಿಂದ ಬಿಡುಗಡೆ.

ಇಂದು ಒಟ್ಟು 3 ಸಾವು

450 ಕ್ಕೇರಿದ ಒಟ್ಟು ಸಾವಿನ ಸಂಖ್ಯೆ

10 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

#ಹಾಸನ

#Hassan

#ಕೋವಿಡ್ -19

#COVID19

#ವಿಮರ್ಶಾ-vimarsha









ಅಲ್ಪಸಂಖ್ಯಾತರಿಂದ  ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಹಾಸನ.




(ಕರ್ನಾಟಕ ವಾರ್ತೆ):- 

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಹಾಸನ ಇವರ ವತಿಯಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದವರಿಗೆ 2020-21ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿಯಲ್ಲಿ ನಿಗಮದಿಂದ ಸಾಲ ಹಾಗೂ ಸಹಾಯಧನ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮುಖೇನ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
 ವೃತ್ತಿ ಪ್ರೋತ್ಸಾಹ ಯೋಜನೆ(ಪರಿಷ್ಕøತ)ಯಡಿ 1,00,000 ರೂ. ಗಳಿಗೆ ಶೇ.50 ರಷ್ಟು ಸಾಲ ಹಾಗೂ ಶೇ.50 ರಷ್ಟು ಸಹಾಯಧನವನ್ನು ನಿಗಮದಿಂದ ನೇರವಾಗಿ ನೀಡಲಾಗುತ್ತದೆ. ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ 1 ರಿಂದ 5 ಎಕರೆ ಒಳಗಿರುವ ಖುಷ್ಕಿ ಜಮೀನಿನಲ್ಲಿ ಘಟಕ ವೆಚ್ಚ 2 ಲಕ್ಷಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಯಿಸಿ ಕೊಡುವ ಮುಖೇನ ನೀರಾವರಿ ಸೌಲಭ್ಯವನ್ನು ಒದಗಿಸಲಾಗುತ್ತಿದೆ. 
ಶ್ರಮಶಕ್ತಿ ಸಾಲ ಹಾಗೂ ಸಹಾಯಧನ ಯೋಜನೆಯಡಿಯಲ್ಲಿ ಸಾಂಪ್ರದಾಯಿಕ ವೃತ್ತಿ ಕುಲಕಸುಬುದಾರರಿಗೆ ಕುಲಕಸುಬುಗಳನ್ನು ಕೈಗೊಳ್ಳಲು ನಿಗಮದಿಂದ 25,000 ರೂ. ಹಾಗೂ 50,000 ರೂ. ಗಳಿಗೆ ಶೇ.50 ರಷ್ಟು ಸಾಲ ಹಾಗೂ ಶೇ.50 ರಷ್ಟು ಸಹಾಯಧನವನ್ನು ಕಲ್ಪಿಸಲಾಗುತ್ತದೆ. 
 
 ಮೈಕ್ರೋಲೋನ್ ಯೋಜನೆ (ಸ್ವ ಸಹಾಯ ಸಂಘದ ಸದಸ್ಯರಿಗೆ) ಈ ಯೋಜನೆಯಡಿಯಲ್ಲಿ ಸ್ವ ಸಹಾಯ ಸಂಘದ ಪ್ರತಿ ಸದಸ್ಯರಿಗೆ 10,000 ರೂ. ಗಳನ್ನು ನೀಡಲಾಗುವುದು. ಈ ಯೋಜನೆಯಡಿ 5,000 ರೂ. ಗಳ ಸಾಲ ಹಾಗೂ 5,000 ರೂ. ಗಳ ಸಹಾಯಧನವಾಗಿರುತ್ತದೆ. 
 ಗೃಹ ನಿರ್ಮಾಣ ಮೇಲಿನ ಮಾರ್ಜಿನ್ ಹಣ ಸಾಲ ಯೋಜನೆಯಡಿ ಸರ್ಕಾರಿ ಸ್ವಾಮ್ಯದ ಗೃಹ ನಿರ್ಮಾಣ ಸಂಸ್ಥೆಗಳ ಸಾಲ ಸೌಲಭ್ಯ ಪಡೆದಿರುವ ಫಲಾನುಭವಿಗಳಿಗೆ ಶೇ.4 ರ ಬಡ್ಡಿ ದರದಲ್ಲಿ ಗರಿಷ್ಠ 1 ಲಕ್ಷದವರೆಗೆ ಮಾರ್ಜಿನ್ ಹಣ ಸಾಲ ಸೌಲಭ್ಯ ನೀಡಲಾಗುವುದು (ಸಾಲದ ಹಣವನ್ನು ಗೃಹ ನಿರ್ಮಾಣ ಸಂಸ್ಥೆಗಳ ಮುಖೇನ ಬಿಡುಗಡೆ ಮಾಡಲಾಗುವುದು).

 ಪಶು ಸಂಗೋಪನಾ ಯೋಜನೆ(ಗ್ರಾಮೀಣ ಪ್ರದೇಶದ ಮಹಿಳೆಯರಿಗೆ) ಈ ಯೋಜನೆಯಡಿ ಹಸು, ಕೋಳಿ, ಕುರಿ ಸಾಕಾಣಿಕೆ ಮುಂತಾದ ಕೃಷಿ ಸಂಬಂಧಿತ ಚಟುವಟಿಕೆಗಳನ್ನು ಕೈಗೊಳ್ಳುವ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ 40,000 ರೂ. ಘಟಕ ವೆಚ್ಚದಲ್ಲಿ ಶೇ.50 ರಷ್ಟು ಸಾಲ ಹಾಗೂ ಶೇ.50 ರಷ್ಟು ಸಹಾಯಧನ ನೀಡಲಾಗುವುದು. 

 ಟ್ಯಾಕ್ಸಿ/ಗೂಡ್ಸ್ ವಾಹನ ಖರೀದಿ ಸಹಾಯಧನ ಯೋಜನೆಯಡಿ ಟ್ಯಾಕ್ಸಿ/ಗೂಡ್ಸ್ ವಾಹನವನ್ನು ಖರೀದಿಸಲು ರಾಷ್ಟೀಕೃತ ಬ್ಯಾಂಕ್‍ಗಳ ಸಹಯೋಗದೊಂದಿಗೆ ಫಲಾನುಭವಿಗಳಿಗೆ 75000 ರೂ.ಗಳ ಸಹಾಯಧನವನ್ನು ನೀಡಲಾಗುವುದು. ಈ ಯೋಜನೆಯಡಿ ಖರೀದಿಸುವ ವಾಹನದ ಮೌಲ್ಯ ಕನಿಷ್ಠ ರೂ.4 ಲಕ್ಷಗಳಿಂದ 7.50 ಲಕ್ಷಗಳಾಗಿರತಕ್ಕದ್ದು(ತೆರಿಗೆ ಹೊರತುಪಡಿಸಿ).
 
 ಅಲ್ಪಸಂಖ್ಯಾತರ ರೈತರ ಕಲ್ಯಾಣ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸಣ್ಣ ಟ್ರ್ಯಾಕ್ಟರ್, ಪವರ್ ಟಿಲ್ಲರ್, ಭೂಮಿ ಸಿದ್ದತೆ ಉಪಕರಣ, ನಾಟಿ ಬಿತ್ತನೆ ಉಪಕರಣ, ಅಂತರ ಬೇಸಾಯ ಉಪಕರಣಗಳು ಇತ್ಯಾದಿ ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು 1 ಲಕ್ಷ ರೂ. ಘಟಕ ವೆಚ್ಚದಲ್ಲಿ ಸಾಲ ಹಾಗೂ ಸಹಾಯಧನವನ್ನು ನೇರವಾಗಿ ನೀಡಲಾಗುವುದು(50,000 ರೂ. ಸಾಲ ಹಾಗೂ 50,000 ರೂ.ಗಳು ಸಹಾಯಧನವಾಗಿರುತ್ತದೆ). 

 ಆಟೋಮೊಬೈಲ್ ಸರ್ವೀಸ್ ತರಭೇತಿ ಹಾಗೂ ಸಾಲ ಯೋಜನೆಯಡಿಯಲ್ಲಿ ನಿರುದ್ಯೋಗ ಯುವಕ/ಯುವತಿಯರಿಗೆ ನಿಗಮದಿಂದ ಆಟೋಮೊಬೈಲ್ ಸರ್ವೀಸ್ ತರಭೇತಿಯನ್ನು ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳ ಸಹಯೋಗದೊಂದಿಗೆ 2 ಲಕ್ಷ ರೂ.ಗಳಿಂದ 5 ಲಕ್ಷದವರೆವಿಗೂ ಸಾಲ ಹಾಗೂ ಸಹಾಯಧನವನ್ನು ನೀಡಲಾಗುವುದು. ಸಾಲಕ್ಕೆ ನಿಗಮದಿಂದ ಕನಿಷ್ಠ 70,000 ರೂ.ಗಳಿಂದ ರೂ. 1.25 ಲಕ್ಷದವರೆವಿಗೂ ಸಹಾಯಧನವನ್ನು ನೀಡಲಾಗುವುದು.

 ಮೈಕ್ರೋಸಾಲ ಯೋಜನೆ ವೈಯಕ್ತಿಕ (ಮಹಿಳೆಯರಿಗೆ ಮಾತ್ರ) 2020-21ನೇ ಸಾಲಿಗೆ ಮಾತ್ರ ಅನ್ವಯಿಸುವಂತೆ ಕೋವಿಡ್-19ರ ಪಿಡುಗಿನಿಂದಾಗಿ ತೊಂದರೆಗೊಳಗಾದ, ಕಡುಬಡತನದಲ್ಲಿರುವ ಅಲ್ಪಸಂಖ್ಯಾತ ಸಮುದಾಯದ ಅಂತ್ಯೋದಯ/ ಬಿ.ಪಿ.ಎಲ್. ಕಾರ್ಡ್ ಹೊಂದಿರುವ 25 ರಿಂದ 50 ವಯೋಮಾನದೊಳಗಿನ ಮಹಿಳೆಯರಿಗೆ, ಈ ಯೋಜನೆಯಡಿಯಲ್ಲಿ ಸಣ್ಣ ವ್ಯಾಪಾರ ಕೈಗೊಳ್ಳಲು ಆರಂಭಿಕ ಬಂಡವಾಳಕ್ಕಾಗಿ 10,000 ರೂ.ಗಳನ್ನು (8000 ರೂ. ಸಾಲ ಮತ್ತು 2000 ರೂ. ಸಹಾಯಧನ) ನೀಡಲಾಗುವುದು.
 
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು ಮತ್ತು ಅರ್ಹತೆಗಳು: ಈ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ ಮೇಲ್ಪಟ್ಟು 45 ಹಾಗೂ 55 ವರ್ಷದೊಳಗೆ ವಯೋಮಿತಿಯಿರಬೇಕು. ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದಿರುವವರು ಮತ್ತೆ ಸೌಲಭ್ಯವನ್ನು ಪಡೆಯಲು ಅರ್ಹರಿರುವುದಿಲ್ಲ.
 ಅರ್ಜಿದಾರರ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಮತ್ತು ಆಧಾರ್ ಕಾರ್ಡನ್ನು ಬ್ಯಾಂಕಿನ ಉಳಿತಾಯ ಖಾತೆಗೆ ಹೊಂದಾಣಿಕೆ (ಲಿಂಕ್) ಮಾಡಿರಬೇಕು. ಈಗಾಗಲೇ ಸಾಲ ಮನ್ನಾ ಆಗಿರುವ ಫಲಾನುಭವಿಗಳಿಗೆ ಹೊಸದಾಗಿ ಸಾಲ ನೀಡಲಾಗುವುದಿಲ್ಲ. ಫಲಾನುಭವಿಯು ರಾಜ್ಯದ ಮತೀಯ ಅಲ್ಪಸಂಖ್ಯಾತರಾಗಿದ್ದು, ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
 ಈ ಯೋಜನೆಯ ಲಾಭ ಪಡೆಯಲು ಅರ್ಜಿದಾರರ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ 81,000 ರೂ. ಮತ್ತು ನಗರ ಪ್ರದೇಶದವರಿಗೆ 1,03,000 ರೂ.ಗಳ ಒಳಗಿರಬೇಕು.
      ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ  ವ್ಯವಸ್ಥಾಪಕರ  ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ (ನಿ) ಮೌಲಾನಾ ಆಜಾದ್ ಭವನ, 1ನೇ ಮಹಡಿ, ಆಕಾಶವಾಣಿ ಕ್ವಾಟ್ರಸ್ ಹಿಂಭಾಗ, ಸಾಲಗಾಮೆ ಮುಖ್ಯ ರಸ್ತೆ, ಶ್ರೀ ವಿದ್ಯಾ ಗಣಪತಿ ಅಡ್ಡರಸ್ತೆ, ಮಲ್ನಾಡ್ ಇಂಜಿನಿಯರಿಂಗ್ ಕಾಲೇಜ್ ಹತ್ತಿರ, ಹಾಸನ-573202 ಇವರನ್ನು  ಕಚೇರಿ  ವೇಳೆಯಲ್ಲಿ  ಸಂಪರ್ಕಿಸಬಹುದಾಗಿದೆ.
 ಈ ಎಲ್ಲಾ ಯೋಜನೆಗಳಲ್ಲಿ ಆನ್‍ಲೈನ್ ನೋಂದಣಿ (ಖegisಣಡಿಚಿಣioಟಿ) ಮಾಡಿದ ಮೇಲೆ ಪ್ರಿಂಟೌಟ್ (Pಡಿiಟಿಣ ouಣ) ತೆಗೆದು ಸಂಬಂಧಿಸಿದ ಎಲ್ಲಾ ದಾಖಲಾತಿಗಳೊಂದಿಗೆ ಜಿಲ್ಲಾ ಕಚೇರಿಗೆ ಖುದ್ದಾಗಿ ಸಲ್ಲಿಸುವುದು. 
 ಅರ್ಜಿಗಳನ್ನು ಆನ್‍ಲೈನ್ ನಲ್ಲಿ ಸಲ್ಲಿಸಲು ಡಿಸೆಂಬರ್ 10 ಕಡೆಯ ದಿನಾಂಕವಾಗಿರುತ್ತದೆ. ಹಾಗೂ ಆನ್‍ಲೈನ್ ಅರ್ಜಿ ಮತ್ತು ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸಲು ಡಿಸೆಂಬರ್ 21 ಕಡೆಯ ದಿನಾಂಕವಾಗಿರುತ್ತದೆ. ಕಚೇರಿ ದೂರವಾಣಿ ಸಂಖ್ಯೆ: 08172-246333ಗೆ ಸಂಪರ್ಕಿಸಬಹುದಾಗಿದೆ.  
 ವೆಬ್‍ಸೈಟ್ ವಿವರ: ಇತರೆ ಯೋಜನೆಗಳ ವೆಬ್‍ಸೈಟ್ ತಿತಿತಿ.ಞmಜಛಿ.ಞಚಿಡಿ.ಟಿiಛಿ.iಟಿ/ಟoಚಿಟಿ/ಟogiಟಿ.ಚಿsಠಿx. ಮೈಕ್ರೋಸಾಲ ಯೋಜನೆ(ವೈಯಕ್ತಿಕ) ವೆಬ್‍ಸೈಟ್ ಞmಜಛಿmiಛಿಡಿo.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಮಾಹಿತಿ ಪಡೆಯಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಪ್ರತಾಪ ಪಿ. ಅವರು ತಿಳಿಸಿದ್ದಾರೆ.
**********
ಪ್ರಧಾನ ಸಂಪಾದಕರು :- ಹರೀಶ್ ಹೆಚ್ ಆರ್ ಕೋಟೆ ಸುದ್ದಿ ಸಂಪಾದಕರು :- ನಾಗೇಂದ್ರ ಹೆಚ್ ಎನ್

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ರೈತ ದಿನ ಆಚರಣೆ-ಸಾವಯವ ಕೃಷಿ ಪದ್ಧತಿಗೆ ಸಲಹೆ.

👇👇👇👇👇👇👇👇👇👇👇👇👇 ರೈತ ದಿನಾಚರಣೆ https://youtube.com/shorts/EGX4c_IVzY8?si=erkB19_6MH0KmBG6 ಮೊಸಳೆಹೊಸಹಳ್ಳಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ರಾಷ್ಟ್ರೀಯ ರೈತರ ದಿನದ ಅಂಗವಾಗಿ ಸಾವಯವ ಕೃಷಿ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಪುಣ್ಯಭೂಮಿ ಪರಿಸರ ಪ್ರಶಸ್ತಿ ಮತ್ತು ಶ್ರೇಷ್ಠ ಕೃಷಿಕ ಪ್ರಶಸ್ತಿ ಪುರಸ್ಕೃತರಾದ ಕಟ್ಟಾಯ ಹೋಬಳಿಯ ಬ್ಯಾಡರಹಳ್ಳಿಯ ಸಾವಯವ ಕೃಷಿಕರು, ಪ್ರಗತಿಪರ ರೈತರು ಮತ್ತು ಪಾರಂಪರಿಕ ವೈದ್ಯರಾದ ಶ್ರೀಯುತ ರವಿಶಂಕರ್ ಅವರು ಆಗಮಿಸಿದ್ದರು. ಸಂಸ್ಥೆಯಲ್ಲಿ ರೈತರಿಂದ ಗಿಡ ನೆಡುವುದರ ಮೂಲಕ ರೈತರ ದಿನವನ್ನು ಉದ್ಘಾಟಿಸಲಾಯಿತು. ಸಾವಯವ ಕೃಷಿಯನ್ನು ಉದ್ದೇಶಿಸಿ ಮಾತನಾಡಿದ ಇವರು ವಿದ್ಯಾರ್ಥಿಗಳಿಗೆ ಸಾವಯವ ಕೃಷಿಯ ಕ್ರಮಗಳು, ಆರೋಗ್ಯಕರ ಪ್ರಯೋಜನಗಳನ್ನು ವಿವರಿಸುತ್ತಾ, ಬೆಳೆಗೆ ಯಾವುದೇ ರಾಸಾಯನಿಕ ಗೊಬ್ಬರಗಳು, ಕೀಟನಾಶಕಗಳನ್ನು ಬಳಸದೇ ಕೇವಲ ಹಸುವಿನ ಸಗಣಿ ಮತ್ತು ಗಂಜುಳದಿಂದ ರಸಗೊಬ್ಬರ ಮತ್ತು ಸಾವಯವ ಕೀಟನಾಶಕವನ್ನು ತಯಾರಿಸಿ ಮಣ್ಣಿನ ಫಲವತ್ತತೆಯನ್ನು ಹೇಗೆ ಹೆಚ್ಚಿಸುವುದು ಮತ್ತು ಯಾವ ಕಾಲ, ನಕ್ಷತ್ರ, ಹವಾಮಾನ ಮತ್ತು ಮಾಸಕ್ಕನುಗುಣವಾಗಿ ಯಾವ ಬೆಳೆ ಬೆಳೆಯಬೇಕೆಂಬುದನ್ನು ರೈತರು ಸೂಕ್ತವಾಗಿ ಅರಿತಿರಬೇಕು ಮತ್ತು ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಗೊಳಿಸಿಕೊಳ್ಳ

ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನ ಆಚರಣೆ.

ಹಾಸನ ತಾಲ್ಲೂಕಿನ ಮೊಸಳೆಹೊಸಹಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕದ ವತಿಯಿಂದ ರೆಡ್ ರಿಬ್ಬನ್ ಕ್ಲಬ್ ಸಹಯೋಗದೊಂದಿಗೆ, ವಿಶ್ವ ಏಡ್ಸ್ ದಿನದ ಪ್ರಯುಕ್ತ ಸಂಸ್ಥೆಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.. . ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಾಸನ ಜಿಲ್ಲಾ ಏಡ್ಸ್ ಪ್ರಿವೆನ್ಷನ್ ಮತ್ತು ಕಂಟ್ರೋಲ್ ಘಟಕದ ಸೂಪರ್ವೈಸರ್ ಶ್ರೀಯುತ ರವಿಕುಮಾರ್ ವಿ. ಬಲ್ಲೇನಹಳ್ಳಿ ಯವರು ಮತ್ತು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀಯುತ ನಾಗೇಶ್ ರವರು ಹೆಚ್.ಐ.ವಿ. ಸೋಂಕಿನ ಬಗ್ಗೆ ವಿದ್ಯಾರ್ಥಿಗಳಿಗೆ ಸಂಕ್ಷಿಪ್ತ ಮಾಹಿತಿ ನೀಡುವ ಮೂಲಕ ಜಾಗೃತಿ ಮೂಡಿಸಿದರು.  ಮುಂದುವರೆದು ಸಂಸ್ಥೆಯಲ್ಲಿ ಏಡ್ಸ್/ಹೆಚ್.ಐ.ವಿ. ಸೋಂಕಿನ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸವಾಗಿ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಪೋಸ್ಟರ್ ಡಿಸೈನ್ ಮತ್ತು ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು ಮತ್ತು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು ಸಂಸ್ಥೆಯ ಎನ್.ಎಸ್.ಎಸ್. ಅಧಿಕಾರಿಗಳಾದ ಶ್ರೀಯುತ ವೀರಭದ್ರಸ್ವಾಮಿ ಕೆ.ಎಂ. ರವರು, ಎನ್.ಎಸ್.ಎಸ್. ಚಟುವಟಿಕೆಯ ಅಡಿಯಲ್ಲಿ ವಿದ್ಯಾರ್ಥಿಗಳು ಸುತ್ತಮುತ್ತಲ, ಮೂರು ಗ್ರಾಮಗಳನ್ನು ದತ್ತು ಪಡೆದು ಸ್ವಚ್ಛತೆ, ಆರೋಗ್ಯ, ಉನ್ನತ ಶಿಕ್ಷಣ ಮುಂತಾದ ವಿಷಯಗಳ ಬಗ್ಗೆ ಜಾಗೃತಿ

ಹಾಸನ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗಾವಕಾಶಗಳು.

ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ನೆಲೆಸಿರುವ ಗೃಹಿಣಿಯರು, ನಿವೃತ್ತ ಅಧಿಕಾರಿಗಳು /ನೌಕರರು ಮತ್ತು ನಿರುದ್ಯೋಗಿಗಳಿಗೆ ಆರ್ಥಿಕ ವಲಯದಲ್ಲಿ ಹೂಡಿಕೆ ಇಲ್ಲದೆ ವೃತ್ತಿ ಅವಕಾಶಗಳು / ವ್ಯಾಪಾರ ಅವಕಾಶಗಳು  ಪುರುಷ ಮತ್ತು  ಮಹಿಳೆಯರಿಗೆ   ವಯಸ್ಸಿನ ಮಿತಿ: - 25 ರಿಂದ 65 ವರ್ಷಗಳು.  ದಯವಿಟ್ಟು ನಿಮ್ಮ ವಿವರಗಳನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ.  freelanceadvertisingthassan@gmail.com  ಅಥವಾ  ಸಂಪರ್ಕಿಸಿ  7090899728 Career opportunities /business opportunities with out an investments in financial sector for housewives ,retired officials /employees and unemployed persons residing in Hassan district, Karnataka state India For both male and female. Age limit:- 25 to 65 years. Please send your details to below email id. freelanceadvertisingathassan@gmail.com Or  Contact  070908 99728