ವಿಷಯಕ್ಕೆ ಹೋಗಿ

ವಿಮರ್ಶಾ -ಸುದ್ದಿ ನೋಟ


   ಕೆ. ಡಿ. ಪಿ  ತ್ರೈಮಾಸಿಕ  ಸಭೆ  ಮತ್ತು ಜಿಲ್ಲಾ ಸಚಿವರ ಪ್ರವಾಸ 
         

       ಜಿಲ್ಲಾ ಪಂಚಾಯತ್. ಹಾಸನ 

               ಕೆ.ಗೋಪಾಲಯ್ಯ
ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು  ಹಾಸನ ಸರ್ಕಾರಿ ವಸತಿ ಅಥಿತಿ ಗೃಹಕ್ಕೆ ಆಗಮಿಸಲಿದ್ದಾರೆ. ಜಿಲ್ಲಾ 10.30 ಕ್ಕೆ ಜಿಲ್ಲಾಪಂಚಾಯಿತಿ ಹೊಯ್ಸಳ ಸಂಭಾಂಗಣದಲ್ಲಿ ನಡೆಯುವ 2020 ನೇ ಸಾಲಿನ ಹಾಸನ ತ್ರೈ ಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಹಿಸಲಿದ್ದಾರೆ. ಸಂಜೆ 4.30ಕ್ಕೆ ಹಾಸನದಿಂದ ಬೆಂಗಳೂರಿಗೆ ರಸ್ತೆ ಮಾರ್ಗವಾಗಿ ತೆರಳಲಿದ್ದಾರೆ.
****************************
ಅಂತರಾಷ್ಟ್ರೀಯ ದತ್ತು ಮಾಸಾಚರಣೆ

- ಈ ಬಾರಿ ನವೆಂಬರ್ ತಿಂಗಳನ್ನು ಅಂತರಾಷ್ಟ್ರೀಯ ದತ್ತು ಮಾಸಾವನ್ನಾಗಿ ಆಚರಿಸಲಾಗುತ್ತದೆ.
      ಪ್ರಸ್ತುತ ಬಾಲಾನ್ಯಾಯ (ಮಕ್ಕಳ ಪಾಲನೆಮತ್ತು ರಕ್ಷಣೆ) ಅಧಿನಿಯಮ -2015 ಅಡಿಯಲ್ಲಿ ಹಾಸನ ಜಿಲ್ಲೆಯಲ್ಲಿ ತವರು ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಮತ್ತು ಕಾಮಧೇನು ಶಿಶುಕೇಂದ್ರ ಎಂಬ ಎರಡು ವಿಶೇಷ ದತ್ತು ಕೇಂದ್ರಗಳು ಕಾರ್ಯನಿರ್ವಹಿಸುತ್ತಿದೆ. ಸದರಿ ಸಂಸ್ಥೆಗಳು ಸರ್ಕಾರದ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುತ್ತಿದ್ದು, ಆಸಕ್ತರು ನಿಯಮನುಸಾರ ಕೇಂದ್ರಗಳಲ್ಲಿ ಮಕ್ಕಳನ್ನು ಕಾನೂನುಬದ್ಧವಾಗಿ ದತ್ತು ತೆಗೆದುಕೊಳ್ಳಬಹುದು ಎಂದು ತಿಳಿಸಲಾಗಿದೆ.
       ಕುಟುಂಬ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು. ಈ ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತವರಣವು ಕಲ್ಪಿಸುತ್ತಿದೆ. ಮಕ್ಕಳಾಗದೇ ಮಗುವಿನ ನಿರೀಕ್ಷೆಯಲ್ಲಿ ಪರಿತಪಿಸುತ್ತಿರುವವರು ಮಕ್ಕಳನ್ನು ಪಡೆದು ಕೊಳ್ಳಬಹುದು. ಮತ್ತು ಪಡೆಯುವುದು ಕಾನೂನುಬದ್ಧ ಒಂದು ಸಾಮಾಜಿಕ ಪ್ರಕ್ರಿಯೆಯಾಗಿದೆ. ಈ ಮೂಲಕ ಪ್ರಕೃತಿ ದತ್ತವಾಗಿ ಸಂಬಂಧವಿರದ ಪಾಲಕರು ಮತ್ತು ಮಕ್ಕಳ ನಡುವೆ ಕಾನೂನುಬದ್ಧ ಬಾಂಧ್ಯವ್ಯವನ್ನು ಬೆಸೆಯಲಾಗುವುದು. ದತ್ತು ಸ್ವೀಕಾರವು ಮಗುವಿನ ಮತ್ತು ದತ್ತು ಪೋಷಕರ ನಡುವೆ ಹಕ್ಕು ಮತ್ತು ಬಾಧ್ಯತೆ ಸ್ಥಾಪಿಸುವ ಮೂಲಕ ನೈಜ ತಂದೆ-ತಾಯಿ ಮತ್ತು ಮಗುವಿನ ನಡುವೆ ಒಂದು ನವಿರಾದ ಸಂಬಂಧ ಬೆಸೆಯುತ್ತದೆ. ಎಂದು ತಿಳಿಸಿದರು.
     ಅನಧಿಕೃತವಾಗಿ ಮಕ್ಕಳನ್ನು ಮಾರಾಟ ಮಾಡಿದವರಿಗೆ ಹಾಗೂ ಮಕ್ಕಳನ್ನು ಕೊಂಡವರಿಗೆ ಬಾಲಾನ್ಯಾಯ ಕಾಯ್ದೆ- 2015 ಕಲಂ – 81 ಅನ್ವಯ 5 ವರ್ಷಗಳ ಕಠಿಣ ಸಜೆ ಹಾಗೂ ರೂ ಒಂದು ಲಕ್ಷ ದಂಡ ವಿಧಿಸಬಹುದಾಗಿದೆ. ಒಂದು ವೇಳೆ ಇಂತಹ ಪ್ರಕರಣಗಳಲ್ಲಿ ಆಸ್ಪತ್ರೆ ಸಿಬ್ಬಂಧಿಗಳು ಒಳಗೊಂಡಿದ್ದಲ್ಲಿ ಕಠಿಣ ಸಜೆಯನ್ನು7 ವರ್ಷಗಳವರೆಗೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. 
ಬೀದಿಯಲ್ಲಿ ಬಿಸಾಡಿದ ಮಕ್ಕಳನ್ನು ನೋಡಿದ ಯಾರೇ ಆದರೂ ಮಕ್ಕಳ ಸಹಾಯವಾಣಿ -1098, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ, ವಿಶೇಷ  ದತ್ತು ಕೇಂದ್ರಗಳು ಹಾಗೂ ಸ್ಥಳೀಯ ಪೋಲೀಸ್  ಠಾಣೆಗೆ ಮಾಹಿತಿಯನ್ನು ನೀಡಬಹುದಾಗಿದೆ.
*******************
ಲೋಪರಹಿತ ಮತದಾರರ ಪಟ್ಟಿ ಬಗ್ಗೆ ಗಮನ ಹರಿಸಲು ಸೂಚನೆ:-
ನವೀನ್ ರಾಜ್ ಸಿಂಗ್ 

 
 ಶೀಘ್ರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗಲಿದ್ದು, ಮತದಾರರ ಪಟ್ಟಿಯಲ್ಲಿ ಯಾವುದೇ ಲೋಪ ಇರದಂತೆ ಎಚ್ಚರಿಕೆ ವಹಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಮತದಾರರ ಪಟ್ಟಿ ವೀಕ್ಷಕರಾದ ಹಾಗೂ  ನವೀನ್ ರಾಜ್ ಸಿಂಗ್ ತಿಳಿಸಿದ್ದಾರೆ.
 `ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಮತದಾರರಪಟ್ಟಿ  ಪರಿಷ್ಕರಣೆ ಕುರಿತಂತೆ ಸಭೆ ನಡೆಸಿದ ಅವರು ಯಾವುದೇ ಕಾರಣಕ್ಕೂ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಗಮನಹರಿಸಿ ಹಾಗೂ ಮೃತಪಟ್ಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಿ ಎಂದರು.
 ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು 18 ವರ್ಷ ತುಂಬಿದ ಎಲ್ಲಾ ಅರ್ಹರಿಗೂ ಆವಕಾಶ ಇದ್ದು ಈ ಬಗ್ಗೆ ವ್ಯಾಪಕ ಪ್ರಚಾರ ನೀಡಿ ಎಂದು ನವೀನ್ ರಾಜ್ ಸಿಂಗ್ ಹೇಳಿದರು.
 ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಮತದಾನವಾಗಿರುವ ಬೂತ್‍ಗಳನ್ನು  ಪತ್ತೆ ಮಾಡಿ ಅಲ್ಲಿ ಕಡಿಮೆ ಮತದಾನಕ್ಕೆ ಕಾರಣವೇನು ಎಂಬುದರ ಬಗ್ಗೆ ಅಧ್ಯಯನಾತ್ಮಕವಾಗಿ ಪರಿಶೀಲಿಸಿ ಮತದಾರರ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಅರಿವು ಮೂಡಿಸಿ ಎಂದರು.
 ಮತದಾರರ ಪಟ್ಟಿಯಲ್ಲಿರುವ ಮತದಾರರಿಗೂ ಹಾಗೂ ಜನಸಂಖ್ಯೆಗೂ ನಡುವೆ ಇರುವ ಅನುಪಾತದ ಕುರಿತಂತೆ ಜಿಲ್ಲೆಯ (ಇP ಖಚಿಣio) ಅನುಪಾತವು 79.76 ಇರುತ್ತದೆ. ಪ್ರಸ್ತುತ ಸಾಲಿನ ಪರಿಷ್ಕರಣೆಯಲ್ಲಿ ಜಿಲ್ಲೆಯ ಅನುಪಾತಕ್ಕಿಂತ ಹೆಚ್ಚಿರುವ 193-ಶ್ರವಣಬೆಳಗೊಳ, 196-ಹಾಸನ ಮತ್ತು 197-ಹೊಳೆನರಸೀಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಸೇರ್ಪಡೆಯ ಪ್ರಮಾಣವು ಹೆಚ್ಚಾಗಿದ್ದು, ಮತದಾರರ ಪಟ್ಟಿಯಿಂದ ಅನರ್ಹ ಮತದಾರರನ್ನು (ವಲಸೆ, ಮರಣ, ಪುನರಾವರ್ತನೆ) ಕೈಬಿಡಲು ಬಗ್ಗೆ ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳುವಂತೆ ನವೀನ್ ರಾಜ್ ಸಿಂಗ್ ಹೇಳಿದರು.
 ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂದರ್ಭದಲ್ಲಿ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಂಡಿರುವ ಬಗ್ಗೆ, ಕಾರ್ಯಕ್ರಮದ ಯೋಜನೆ ಮತ್ತು ಇದರ ರೂಪುರೇಷೆಗಳ ಕುರಿತು ಜಿಲ್ಲಾಧಿಕಾರಿ ಆರ ಗಿರೀಶ್ ತಿಳಿಸಿದರು.
 ಅರ್ಹತಾ ದಿನಾಂಕ: 01/01/2021 ಕ್ಕೆ ಅನ್ವಯವಾಗುವಂತೆ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2021 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ “ವಿಶೇಷ ನೋಂದಣಿ” ಕಾರ್ಯವನ್ನು ಆಯೋಗವು ನಿಗದಿತ  ದಿನಾಂಕಗಳಂದು ಹಮ್ಮಿಕೊಳ್ಳಲಾಗಿತ್ತಿದ್ದು, ಜಿಲ್ಲೆಯಲ್ಲಿರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳಲ್ಲಿ ಆಯಾ ಮತಗಟ್ಟೆ ಹಂತದ ಅಧಿಕಾರಿಗಳು ದಿನಾಂಕ 29ನೇ ನವೆಂಬರ್, 6ನೇ ಡಿಸೆಂಬರ್ ಮತ್ತು 13ನೇ ಡಿಸೆಂಬರ್ ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಡ್ಡಾಯವಾಗಿ ನಿಗದಿಪಡಿಸಿದ ಮತಗಟ್ಟೆಗಳಲ್ಲಿ ಹಾಜರಿದ್ದು, ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸತಕ್ಕದ್ದು ಹಾಗೂ ಸ್ವೀಕೃತಗೊಂಡ ಅರ್ಜಿಗಳನ್ನು ಪಡೆಯಲು ಈಗಾಗಲೇ  ಎಲ್ಲಾ  ಅಧಿಕಾರಿ/ಸಿಬ್ಬಂದಿ  ವರ್ಗದವರಿಗೆ  ಸೂಕ್ತ  ನಿರ್ದೇಶನ  ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ವೀಕ್ಷಕರ ಗಮನಕ್ಕೆ ತಂದರು.
 ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಉಪವಿಭಾಗಾಧಿಕಾರಿ ಬಿ.ಎ. ಜಗದೀಶ್, ಗಿರೀಶ್ ನಂದನ್, ತಹಸೀಲ್ದಾರರಾದ ಶಿವಶಂಕರಪ್ಪ, ಚುನಾವಣಾ ತಹಸೀಲ್ದಾರರಾದ ಪದ್ಮನಾಭಶಾಸ್ತ್ರಿ ಚುನಾವಣಾ ಶಿರಸ್ತೆದಾರರಾದ ಸಿದ್ದರಾಜು  ಮತ್ತಿತರರು ಹಾಜರಿದ್ದರು ಹಾಗೂ ತಹಸೀಲ್ದಾರರುಗಳು ವಿಡಿಯೋ ಸಂವಾದದ ಮೂಲಕ ಸಭೆಯಲ್ಲಿ ಪಾಲ್ಗೂಂಡರು. 
****************************

ಸಂಸದರಿಂದ ದೊಡ್ಡ ಗದ್ದವಳ್ಳಿ ದೇವಾಲಯಕ್ಕೆ ಭೇಟಿ :

ಹಾಸನ ಜಿಲ್ಲೆಯ ದೊಡ್ಡಗದ್ದವಳ್ಳಿ ಗ್ರಾಮದ ಚತುಷ್ಕೂಟ ಮಹಾಲಕ್ಷ್ಮಿ  ದೇವಾಲಯದ ದಕ್ಷಿಣ ಗರ್ಭಗೃಹದಲ್ಲಿದ್ದ ಮಹಾಕಾಳಿ ಅಥವಾ ದಕ್ಷಿಣ ಭದ್ರಕಾಲಿ ಅಮ್ಮನವರ ವಿಗ್ರಹವು ಒಡೆದು ಹೋದ ಹಿನ್ನೆಲೆಯಲ್ಲಿ  ಲೋಕಸಭಾ ಸದಸ್ಯರಾದ ಪ್ರಜ್ವಲ್ ರೇವಣ್ಣನವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
 ತನಿಖೆಯನ್ನು ಸಮರ್ಪಕವಾಗಿ ನಡೆಸಿ ತಪ್ಪಿತಸ್ಥ ರನ್ನು ಶೀಘ್ರವೇ ಪತ್ತೆಮಾಡುವಂತೆ ಅವರು ಅಪರ ಪೋಲಿಸ್ ವರಿಷ್ಠಾಧಿಕಾರಿ ನಂದಿನಿ ಅವರಿಗೆ ಸೂಚನೆ ನೀಡಿದರು.ಪ್ರಮುಖ  ದೇವಾಲಯಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಮಾಡಬೇಕು ಜೊತೆಗೆ ಅಗತ್ಯವಿರುವ ಕಡೆಗಳಲ್ಲಿ ಸಿ.ಸಿ ಕ್ಯಾಮರಾ ಅಳವಡಿಸುವಂತೆ ಅವರು ಸೂಚನೆ ನೀಡಿದರು.  ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಸ್ವರೂಪ್ , ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ನಾಗರಾಜ್,ಅಪರ ಪೋಲಿಸ್ ವರಿಷ್ಠಾಧಿಕಾರಿ ನಂದಿನಿ ಹಾಗೂ  ಪೋಲಿಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು.

****************************

ನ,26 ರಂದು ಪೋನ್ ಇನ್ ಕಾರ್ಯಕ್ರಮ:-
ಹಾಸನ ಆಕಾಶವಾಣಿಯಲ್ಲಿ ನೇರ ಪೋನ್ ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕರ್ನಾಟಕಸರ್ಕಾರವು ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಮಕ್ಕಳ ಭಾಗವಹಿಸುವಿಕೆ ಹಿನ್ನಲೆಯಲ್ಲಿ ನ 14 ರಿಂದ 24 ಜನವರಿ 2021 ರವರೆಗೆ ಮಕ್ಕಳ ಹಕ್ಕುಗಳ ಗ್ರಾಮ ಸಭೆ, ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
 ಈ ಕಾರ್ಯಕ್ರಮದಲ್ಲಿ ಶಾಲೆ, ಮನೆ ಅಂಗನವಾಡಿಗಳಲ್ಲಿ ಮಕ್ಕಳ ಜೀವನ ಮಟ್ಟವನ್ನು ಉತ್ತಮಗೊಳಿಸುವ ಸಲುವಾಗಿ ಹಾಗೂ ಮಕ್ಕಳ ಆರೋಗ್ಯ ಸುರಕ್ಷತೆ ಬಗ್ಗೆ ಶಿಕ್ಷಕರು ಮತ್ತು ಮಕ್ಕಳು ಪ್ರಶ್ನೆಗಳನ್ನು ದೂರವಾಣಿ 080-22370477 ಅಥವಾ 22370488/22370499 ಮೂಲಕ ಕೇಳಲು ಸರದಿ ಕಾರ್ಯಕ್ರಮದಲ್ಲಿಭಾಗವಹಿಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಕಾರ್ಯಾಲಯ ತಿಳಿಸಿದೆ.
****************************

#ವಿಮರ್ಶಾ-vimarsha

An online digital media


ಪ್ರಧಾನ ಸಂಪಾದಕರು :-
ಹರೀಶ್ ಹೆಚ್ ಆರ್ 
ಕೋಟೆ 


ಸುದ್ದಿ ಸಂಪಾದಕರು :-
ನಾಗೇಂದ್ರ.ಹೆಚ್. ಎನ್.


















ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ರೈತ ದಿನ ಆಚರಣೆ-ಸಾವಯವ ಕೃಷಿ ಪದ್ಧತಿಗೆ ಸಲಹೆ.

👇👇👇👇👇👇👇👇👇👇👇👇👇 ರೈತ ದಿನಾಚರಣೆ https://youtube.com/shorts/EGX4c_IVzY8?si=erkB19_6MH0KmBG6 ಮೊಸಳೆಹೊಸಹಳ್ಳಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ರಾಷ್ಟ್ರೀಯ ರೈತರ ದಿನದ ಅಂಗವಾಗಿ ಸಾವಯವ ಕೃಷಿ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಪುಣ್ಯಭೂಮಿ ಪರಿಸರ ಪ್ರಶಸ್ತಿ ಮತ್ತು ಶ್ರೇಷ್ಠ ಕೃಷಿಕ ಪ್ರಶಸ್ತಿ ಪುರಸ್ಕೃತರಾದ ಕಟ್ಟಾಯ ಹೋಬಳಿಯ ಬ್ಯಾಡರಹಳ್ಳಿಯ ಸಾವಯವ ಕೃಷಿಕರು, ಪ್ರಗತಿಪರ ರೈತರು ಮತ್ತು ಪಾರಂಪರಿಕ ವೈದ್ಯರಾದ ಶ್ರೀಯುತ ರವಿಶಂಕರ್ ಅವರು ಆಗಮಿಸಿದ್ದರು. ಸಂಸ್ಥೆಯಲ್ಲಿ ರೈತರಿಂದ ಗಿಡ ನೆಡುವುದರ ಮೂಲಕ ರೈತರ ದಿನವನ್ನು ಉದ್ಘಾಟಿಸಲಾಯಿತು. ಸಾವಯವ ಕೃಷಿಯನ್ನು ಉದ್ದೇಶಿಸಿ ಮಾತನಾಡಿದ ಇವರು ವಿದ್ಯಾರ್ಥಿಗಳಿಗೆ ಸಾವಯವ ಕೃಷಿಯ ಕ್ರಮಗಳು, ಆರೋಗ್ಯಕರ ಪ್ರಯೋಜನಗಳನ್ನು ವಿವರಿಸುತ್ತಾ, ಬೆಳೆಗೆ ಯಾವುದೇ ರಾಸಾಯನಿಕ ಗೊಬ್ಬರಗಳು, ಕೀಟನಾಶಕಗಳನ್ನು ಬಳಸದೇ ಕೇವಲ ಹಸುವಿನ ಸಗಣಿ ಮತ್ತು ಗಂಜುಳದಿಂದ ರಸಗೊಬ್ಬರ ಮತ್ತು ಸಾವಯವ ಕೀಟನಾಶಕವನ್ನು ತಯಾರಿಸಿ ಮಣ್ಣಿನ ಫಲವತ್ತತೆಯನ್ನು ಹೇಗೆ ಹೆಚ್ಚಿಸುವುದು ಮತ್ತು ಯಾವ ಕಾಲ, ನಕ್ಷತ್ರ, ಹವಾಮಾನ ಮತ್ತು ಮಾಸಕ್ಕನುಗುಣವಾಗಿ ಯಾವ ಬೆಳೆ ಬೆಳೆಯಬೇಕೆಂಬುದನ್ನು ರೈತರು ಸೂಕ್ತವಾಗಿ ಅರಿತಿರಬೇಕು ಮತ್ತು ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಗೊಳಿಸಿಕೊಳ್ಳ

ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನ ಆಚರಣೆ.

ಹಾಸನ ತಾಲ್ಲೂಕಿನ ಮೊಸಳೆಹೊಸಹಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕದ ವತಿಯಿಂದ ರೆಡ್ ರಿಬ್ಬನ್ ಕ್ಲಬ್ ಸಹಯೋಗದೊಂದಿಗೆ, ವಿಶ್ವ ಏಡ್ಸ್ ದಿನದ ಪ್ರಯುಕ್ತ ಸಂಸ್ಥೆಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.. . ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಾಸನ ಜಿಲ್ಲಾ ಏಡ್ಸ್ ಪ್ರಿವೆನ್ಷನ್ ಮತ್ತು ಕಂಟ್ರೋಲ್ ಘಟಕದ ಸೂಪರ್ವೈಸರ್ ಶ್ರೀಯುತ ರವಿಕುಮಾರ್ ವಿ. ಬಲ್ಲೇನಹಳ್ಳಿ ಯವರು ಮತ್ತು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀಯುತ ನಾಗೇಶ್ ರವರು ಹೆಚ್.ಐ.ವಿ. ಸೋಂಕಿನ ಬಗ್ಗೆ ವಿದ್ಯಾರ್ಥಿಗಳಿಗೆ ಸಂಕ್ಷಿಪ್ತ ಮಾಹಿತಿ ನೀಡುವ ಮೂಲಕ ಜಾಗೃತಿ ಮೂಡಿಸಿದರು.  ಮುಂದುವರೆದು ಸಂಸ್ಥೆಯಲ್ಲಿ ಏಡ್ಸ್/ಹೆಚ್.ಐ.ವಿ. ಸೋಂಕಿನ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸವಾಗಿ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಪೋಸ್ಟರ್ ಡಿಸೈನ್ ಮತ್ತು ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು ಮತ್ತು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು ಸಂಸ್ಥೆಯ ಎನ್.ಎಸ್.ಎಸ್. ಅಧಿಕಾರಿಗಳಾದ ಶ್ರೀಯುತ ವೀರಭದ್ರಸ್ವಾಮಿ ಕೆ.ಎಂ. ರವರು, ಎನ್.ಎಸ್.ಎಸ್. ಚಟುವಟಿಕೆಯ ಅಡಿಯಲ್ಲಿ ವಿದ್ಯಾರ್ಥಿಗಳು ಸುತ್ತಮುತ್ತಲ, ಮೂರು ಗ್ರಾಮಗಳನ್ನು ದತ್ತು ಪಡೆದು ಸ್ವಚ್ಛತೆ, ಆರೋಗ್ಯ, ಉನ್ನತ ಶಿಕ್ಷಣ ಮುಂತಾದ ವಿಷಯಗಳ ಬಗ್ಗೆ ಜಾಗೃತಿ

ಹಾಸನ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗಾವಕಾಶಗಳು.

ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ನೆಲೆಸಿರುವ ಗೃಹಿಣಿಯರು, ನಿವೃತ್ತ ಅಧಿಕಾರಿಗಳು /ನೌಕರರು ಮತ್ತು ನಿರುದ್ಯೋಗಿಗಳಿಗೆ ಆರ್ಥಿಕ ವಲಯದಲ್ಲಿ ಹೂಡಿಕೆ ಇಲ್ಲದೆ ವೃತ್ತಿ ಅವಕಾಶಗಳು / ವ್ಯಾಪಾರ ಅವಕಾಶಗಳು  ಪುರುಷ ಮತ್ತು  ಮಹಿಳೆಯರಿಗೆ   ವಯಸ್ಸಿನ ಮಿತಿ: - 25 ರಿಂದ 65 ವರ್ಷಗಳು.  ದಯವಿಟ್ಟು ನಿಮ್ಮ ವಿವರಗಳನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ.  freelanceadvertisingthassan@gmail.com  ಅಥವಾ  ಸಂಪರ್ಕಿಸಿ  7090899728 Career opportunities /business opportunities with out an investments in financial sector for housewives ,retired officials /employees and unemployed persons residing in Hassan district, Karnataka state India For both male and female. Age limit:- 25 to 65 years. Please send your details to below email id. freelanceadvertisingathassan@gmail.com Or  Contact  070908 99728