ವಿಷಯಕ್ಕೆ ಹೋಗಿ

ಜ.5-ಹಾಸನ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ


ವಿಮರ್ಶಾ -vimarsha

ಜ.5 ರಂದು ವಿವಿಧ ಹುದ್ದೆಗಳ ನೇಮಕಾತಿಗೆ:      ನೇರ ಸಂದರ್ಶನ 
ಹಾಸನ .

( ಕರ್ನಾಟಕ ವಾರ್ತೆ):- 

 ಹಾಸನದ ಹೆಸರಾಂತ ಕಂಪನಿಗಳು ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲು ಜ.5 ರಂದು ಬೆಳಿಗ್ಗೆ 10 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ಮೂಲಕ ಆಯ್ಕೆ ನಡೆಯಲಿದೆ.

       8ನೇ ತರಗತಿ ಎಸ್.ಎಸ್.ಎಲ್.ಸಿ/ ಪಿ.ಯು.ಸಿ/ ಐ.ಟಿ.ಐ/ ಡಿಪ್ಲೋಮೋ, ಯಾವುದೇ ಪದವಿ/ ನಲ್ಲಿ ತೇರ್ಗಡೆ ಹೊಂದಿದ 18 ರಿಂದ 30 ವರ್ಷ ಒಳಪಟ್ಟ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳ್ಳುತ್ತಿದ್ದು, ಆಸಕ್ತ ನಿರುದ್ಯೋಗಿ ಯುವಕ/ ಯುವತಿಯರು  ತಮ್ಮ ಸ್ವವಿವರಗಳು ಆಧಾರ್ ಕಾರ್ಡ್ ಮತ್ತು ಶೈಕ್ಷಣಿಕ ದಾಖಲಾತಿಗಳ ಜೆರಾಕ್ಸ್ ಪ್ರತಿಗಳೊಂದಿಗೆ ಕಛೇರಿಗೆ ಹಾಜರಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.  
      
     ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಇವರನ್ನು  ಖುದ್ದಾಗಿ ಅಥವಾ ದೂ.ಸ : 08172-296374 ಅಥವಾ  8722606874 / 8660141863 ಅನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. ಕೋವಿಡ್ -19 ಇರುವ ಹಿನ್ನೆಲೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಎಲ್ಲಾ ರೀತಿಯ ಮುಂಜಾಗ್ರತಾ  ಕ್ರಮಗಳನ್ನ  ಪಾಲಿಸುವಂತೆ  ತಿಳಿಸಿದ್ದಾರೆ.

#ಹಾಸನ

#ಉದ್ಯೋಗಾವಕಾಶಗಳು 

#ಸಂದರ್ಶನ 


#ವಿಮರ್ಶಾ-vimarsha.

ಕಾಮೆಂಟ್‌ಗಳು