ವಿಷಯಕ್ಕೆ ಹೋಗಿ

ವಿಮರ್ಶಾ -ಸುದ್ದಿ ನೋಟ

ವಿಮರ್ಶಾ -vimarsha


ಉಚಿತವಾಗಿ ಹೊಲಿಗೆ ಯಂತ್ರ ನೀಡಲು ಅರ್ಜಿ ಆಹ್ವಾನ
ಹಾಸನ 
(ಕರ್ನಾಟಕ ವಾರ್ತೆ): 

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆವತಿಯಿಂದ ಶ್ರವಣದೋಷವುಳ್ಳ ವಿಕಲಚೇತನರಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರವನ್ನು ಉಚಿತವಾಗಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 

   ಶ್ರವಣದೋಷವುಳ್ಳ ವ್ಯಕ್ತಿಯು ಭಾರತದ ಪ್ರಜೆಯಾಗಿರಬೇಕು ಹಾಗೂ ಕರ್ನಾಟಕದಲ್ಲಿ ಕನಿಷ್ಟ ಹಿಂದಿನ 10 ವರ್ಷಗಳ ನಿವಾಸಿಯಾಗಿರಬೇಕು. ಕನಿಷ್ಠ ಎಸ್.ಎಸ್.ಎಲ್.ಸಿ ವರೆಗೆ ವ್ಯಾಸಂಗ ಮಾಡಿರಬೇಕು ಹಾಗೂ ವೃತ್ತಿಗೆ ಸಂಬಂಧಿಸಿದಂತೆ ಪ್ರಮಾಣ ಪತ್ರ ಸಲ್ಲಿಸಬೇಕು. ಯೋಜನೆಯ ಸೌಲಭ್ಯ ಪಡೆಯಲು ಯಾವುದೇ ಆದಾಯ ಮಿತಿಯಿರುವುದಿಲ್ಲ.

    ಈ ಯೋಜನೆಯಡಿ ಸೌಲಭ್ಯ ಪಡೆಯುವ ಶ್ರವಣದೋಷವುಳ್ಳ ಫಲಾನುಭವಿಗಳು ಬೇರೆ ಯಾವುದೇ ಮೂಲಗಳಿಂದ ಇದೇ ರೀತಿಯ ಸೌಲಭ್ಯ ಪಡೆದಿರಬಾರದು ಹಾಗೂ ಈ ಬಗ್ಗೆ ನೋಟರಿಯಿಂದ ದೃಢೀಕರಿಸಿದ ಪ್ರಮಾಣ ಪತ್ರ ಒದಗಿಸತಕ್ಕದ್ದು. ವಿಕಲಚೇತನತೆಯ ಪ್ರಮಾಣ ಶೇ.40 ಅಥವಾ ಅದಕ್ಕಿಂತ ಹೆಚ್ಚಾಗಿರತಕ್ಕದ್ದು. ಕಡ್ಟಾಯವಾಗಿ ಸಂಬಂಧಪಟ್ಟ ತಹಸೀಲ್ದಾರರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ ನೀಡಬೇಕು. 

    ಈ ಯೋಜನೆಯಡಿ ಜೀವಿತಾವಧಿಯಲ್ಲಿ ಒಮ್ಮೆ ಮಾತ್ರ ಸೌಲಭ್ಯ ನೀಡಲಾಗುವುದು, ಸೌಲಭ್ಯ ಪಡೆದ ನಂತರ ಬೇರೆಯವರಿಗೆ ಹಸ್ತಾಂತರಿಸಬಾರದು/ಪರೆಭಾರೆ ಮಾಡಬಾರದು ಈ ಕುರಿತು ದೃಢೀಕರಣ ನೀಡುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

    ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜ.28 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಲು ತಿಳಿಸಿದೆ.

******************************


ಜಿಲ್ಲೆಯಲ್ಲಿಂದು ಹೊಸದಾಗಿ 20 ಕೋವಿಡ್ ಪ್ರಕರಣಗಳು ಪತ್ತೆ
ಹಾಸನ.

(ಕರ್ನಾಟಕ ವಾರ್ತೆ):-

ಜಿಲ್ಲೆಯಲ್ಲಿಂದು ಹೊಸದಾಗಿ 20 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 28,024ಕ್ಕೆ ಏರಿಕೆಯಾಗಿದೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ 194 ಮಂದಿ ಸಕ್ರಿಯ ಸೋಂಕಿತರು ಮಾತ್ರ ಹಾಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
       
        ಈವರೆಗೆ 27,367 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 13 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 463 ಮಂದಿ ಸಾವನ್ನಪ್ಪಿದಾರೆ.
          ಇಂದು ಪತ್ತೆಯಾದ 20 ಕೊರೋನಾ ಸೋಂಕು ಪ್ರಕರಣಗಳಲ್ಲಿ 5 ಮಂದಿ ಹಾಸನ ತಾಲ್ಲೂಕು, ಅರಕಲಗೂಡು ತಾಲ್ಲೂಕಿನಲ್ಲಿ 1 ಮಂದಿ  ಹೊಳೆನರಸೀಪುರ ತಾಲ್ಲೂಕಿನಲ್ಲಿ 4 ಮಂದಿ, ಅರಸೀಕೆರೆ ತಾಲ್ಲೂಕಿನಲ್ಲಿ 2 ಮಂದಿ, ಚನ್ನರಾಯಪಟ್ಟಣ 4 ಮಂದಿ, ಸಕಲೇಶಪುರ 2 ಮಂದಿ ಬೇಲೂರು ತಾಲ್ಲೂಕಿನಲ್ಲಿ  2 ಮಂದಿಗೆ ಕೊರೋನ  ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಕುಮಾರ್ ರವರು ತಿಳಿಸಿದ್ದಾರೆ. 

****************************



ವಾಹನಗಳ ಬಹಿರಂಗ ಹರಾಜು 
ಹಾಸನ. 

(ಕರ್ನಾಟಕ ವಾರ್ತೆ): ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಲ್.ಪೆಟ್ ನಲ್ಲಿ ಅಮಾನತ್ತು ಪಡಿಸಿಕೊಂಡಿರುವ ವಾಹನಗಳನ್ನು ಜ.3 ರಂದು ಬೆಳಿಗ್ಗೆ 10 ಗಂಟೆಗೆ  ಹರಾಜು ಪಕ್ರಿಯೆ ನಡೆಸಲಾಗುವುದು.
    ಫಲ್ಸರ್, ಬಾಜಜ್‍ಬೈಕ್, ಹಿರೋಹೊಂಡ, ಡಿಸ್ಕವರ್, ಹಾಗೂ ಸ್ಪ್ಲೆಂಡರ್, ಟಿ.ವಿ.ಎಸ್ ಸುಜೂಕಿ ಸೇರಿದಂತೆ ಒಟ್ಟು 29 ದ್ವೀಚಕ್ರ ವಾಹನಗಳನ್ನು ಹರಾಜು ಪಕ್ರಿಯೆ ನಡೆಸಲಾಗುವುದು ಎಂದು ಸಂಚಾರಿ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ತಿಳಿಸಿದ್ದಾರೆ. 

***************************


ವಿವಿಧ ಪ್ರಶಸ್ತಿ ಫೆಲೋಶಿಪ್‍ಗೆ ಅರ್ಜಿ ಆಹ್ವಾನ
ಹಾಸನ   

(ಕರ್ನಾಟಕ ವಾರ್ತೆ): 

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮಿಯು, ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಒಂದು ಅಂಗ ಸಂಸ್ಥೆಯಾಗಿದ್ದು, 2020-21ನೇ ಸಾಲಿನಲ್ಲಿ ವಿವಿಧ ಪ್ರಶಸ್ತಿಗಳು, ಫೆಲೋಶಿಪ್ ಮತ್ತು ಸದಸ್ಯತ್ವಕ್ಕೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
     ಅರ್ಜಿ ನಮೂನೆ ಮತ್ತು ಇತರೆ ವಿವರಗಳಗಳನ್ನು ಅಕಾಡಮಿಯ ವೆಬ್‍ಸೈಟ್ ಞsಣಚಿಛಿಚಿಜemಥಿ.iಟಿ ನಲ್ಲಿ ಪಡೆಯಬಹುದಾಗಿದ್ದು, ಅರ್ಜಿ ಸಲ್ಲಿಸಲು ಜ.28 ಕೊನೆಯ ದಿನವಾಗಿದೆ ಹೆಚ್ಚಿನ ಮಾಹಿತಿಗಾಗಿ ದೂ.080-29721550/29721549 ಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

*****************************



ನಾಡಿನ ಶಿಲ್ಪಕಲೆಗೆ ಜಕಣಾಚಾರಿಯವರ ಕೊಡುಗೆ ಅಪಾರ : ಜಿಲ್ಲಾಧಿಕಾರಿ 
ಹಾಸನ ಜ.1(ಕರ್ನಾಟಕ ವಾರ್ತೆ): ಅಮರ ಶಿಲ್ಪಿ ಜಕಣಾಚಾರಿಯವರು ಬೇಲೂರು ಹಳೇಬೀಡಿನಲ್ಲಿ ನಾಜೂಕಾದ ಶಿಲ್ಪಕಲೆಗಳ ಮೂಲಕ ವಿಶ್ವವೇ ಬೆರಗುಗೊಳಿಸುವಂತೆ ಮಾಡಿದ್ದು, ನಾಡಿಗೆ ಕೀರ್ತಿ ತಂದಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ.
      ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಮ್ಮಿಕೊಂಡಿದ್ದ ವಿಶ್ವವಿಖ್ಯಾತಿ ಅಮರಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಬೇಲೂರು ಹಳೆಬೀಡು ಸಾವಿರ ಇತಿಹಾಸ ಹೊಂದಿದ್ದು ಇಂತಹ ಶಿಲ್ಪಕಲೆಯನ್ನು ಅಮರ ಶಿಲ್ಪಿ ಜಕಣಾಚಾರಿಯವರ ಕೊಡುಗೆಯಾಗಿದೆ ಅದೇ ರೀತಿ ದೇಶಕ್ಕೆ ವಿಶ್ವಕರ್ಮ ಸಮುದಾಯದ ಕೊಡುಗೆಯು ಹಿರಿಯದಾಗಿದೆ ಎಂದು ಅವರು ಹೇಳಿದರು.
      ಸಮುದಾಯದ  ಮನವಿಯಂತೆ ಶಿಲ್ಪ ಕಲಾ ತರಬೇತಿ ಶಾಲೆ ಹಾಗೂ ಜಕಣಾಚಾರಿ ಅವರ ಪುತ್ಥಳಿ ನಿರ್ಮಾಣಕ್ಕೆ ಸರ್ಕಾರಿ ಜಾಗ ಒದಗಿಸಲು  ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು   ಜಿಲ್ಲಾಧಿಕಾರಿ ತಿಳಿಸಿದರು.
   ಕೆತ್ತನೆ ಮಾಡಿದವರ ಹೆಸರಿನಲ್ಲಿಯೇ ಅಮರ ಎಂದು ಹೆಸರು ಸೇರಿದ್ದು, ಅದರಂತೆ ಅವರು ಎಲ್ಲರ ಮನದಲ್ಲಿ ಉಳಿದಿದ್ದಾರೆ ಎಂದರು.
     ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಿ.ಭಾರತಿ ಅವರು ಮಾತನಾಡಿ ನಮ್ಮ ದೇಶವು ವಿವಿಧ ವೈವಿಧ್ಯತೆಯನ್ನು ಹೊಂದಿದೆ, ಶಿಲ್ಪಕಲೆಯೂ ಇದರಲ್ಲೊಂದು ಪ್ರಮುಖ ಅಂಶವಾಗಿದೆ ಎಂದರು.
     ಶಿಲ್ಪಕಲೆಯಲ್ಲಿಯೇ ಜಕಣಾಚಾರಿಯವರಿಗೆ ಇದ್ದಂತಹ ವೃತ್ತಿಯ ನಿಷ್ಠೆ ಮತ್ತು ಸಮಾಜದ ನಿಷ್ಠೆಯನ್ನು ತಿಳಿಸುತ್ತದೆ. ದೇಶದ ಪಾರಂಪರಿಕ ಕಲೆ ಉಳಿಯಬೇಕು ಹಾಗೂ  ಬಸವಣ್ಣ, ಅಂಬೇಡ್ಕರ್ ಸೇರಿದಂತೆ ಮಹನೀಯರನ್ನು ಯಾವುದೇ ಜಾತಿಗೆ ಸೀಮಿತ ಮಾಡಬಾರದು ಇವರುಗಳೇ ನಮ್ಮ ದೇಶದ ಆಸ್ತಿ ಎಂದು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ತಿಳಿಸಿದರು.
    ವಿಶ್ವಕರ್ಮ ಸಮಾಜದ ಜಿಲ್ಲಾ ಪ್ರಭಾರ ಅಧ್ಯಕ್ಷರಾದ ಜಿ. ಕುಮಾರ್ ಮಾತನಾಡಿ ಜಕಣಾಚಾರಿ ಹಾಗೂ ಡಂಕಣಾಚಾರಿಯವರು ಅದ್ಭುತವಾದ ಶಿಲ್ಪಕಲೆಯನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದರಲ್ಲದೆ,  ಅವರ ಬಾಲ್ಯ ಮತ್ತು ಶಿಲ್ಪ ಕಲೆ ಕುರಿತು ವಿವರಿಸಿದರು.
   ವಿಶ್ವಕರ್ಮ ಸಮಾಜದ ಜಿಲ್ಲಾ ಮಾಜಿ ಅಧ್ಯಕ್ಷರಾದ ಬಿ.ಸಿ ಶಂಕರಚಾರ್ಯರು ಮಾತನಾಡಿ ಜಕಣಾಚಾರಿಯವರು ಈ ದೇಶಕ್ಕೆ ಅಪಾರ ಕೊಡುಗೆಯನ್ನು ನೀಡಿದವರು, ಶಾಂತಿ ಸಂದೇಶವನ್ನು ಸಾರಿದ ಮಹಾನ್ ವ್ಯಕ್ತಿ ಹಾಗೂ ಶಿಲ್ಪಕಲೆ ಈ ದೇಶದ ಸಂಪತ್ತು ಆದ್ದರಿಂದ ಜಕಣಾಚಾರಿಯವರ ಪುತ್ಥಳಿ ಸ್ಥಾಪನೆ ಮಾಡಬೇಕು ಎಂದು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಿಕೊಂಡರು.
       ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಕವಿತರಾಜರಾಂ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ಕೃಷ್ಣೇಗೌಡ, ಸ್ವತಂತ್ರ ಹೋರಾಟಗಾರರಾದ ಹೆಚ್.ಎಂ ಶಿವಣ್ಣ, ಜಿಲ್ಲಾ ವಿಶ್ವಕರ್ಮ ಸಮಾಜ ಮಾಜಿ ಅಧ್ಯಕ್ಷರಾದ ಎಚ್.ವಿ ಹರೀಶ್, ಬಿ.ಲೋಕೆಶ್, ತಾಲ್ಲೂಕು ಅಧ್ಯಕ್ಷರಾದ ಎಚ್.ಬಿ ಕುಮಾರ್ ಆಚಾರ್. ಉಪಾಧ್ಯಕ್ಷರಾದ ಎ. ಬ್ಯಾಟ್ ರಂಗಚಾರ್ ಮತ್ತಿತರರು ಭಾಗವಹಿಸಿದ್ದರು. 
************



ಪ್ರಧಾನ ಸಂಪಾದಕರು 
ಹರೀಶ್ ಹೆಚ್ ಆರ್ ಕೋಟೆ 

ಸುದ್ದಿ ಸಂಪಾದಕರು 

ನಾಗೇಂದ್ರ.ಹೆಚ್. ಎನ್. 






ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ರೈತ ದಿನ ಆಚರಣೆ-ಸಾವಯವ ಕೃಷಿ ಪದ್ಧತಿಗೆ ಸಲಹೆ.

👇👇👇👇👇👇👇👇👇👇👇👇👇 ರೈತ ದಿನಾಚರಣೆ https://youtube.com/shorts/EGX4c_IVzY8?si=erkB19_6MH0KmBG6 ಮೊಸಳೆಹೊಸಹಳ್ಳಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ರಾಷ್ಟ್ರೀಯ ರೈತರ ದಿನದ ಅಂಗವಾಗಿ ಸಾವಯವ ಕೃಷಿ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಪುಣ್ಯಭೂಮಿ ಪರಿಸರ ಪ್ರಶಸ್ತಿ ಮತ್ತು ಶ್ರೇಷ್ಠ ಕೃಷಿಕ ಪ್ರಶಸ್ತಿ ಪುರಸ್ಕೃತರಾದ ಕಟ್ಟಾಯ ಹೋಬಳಿಯ ಬ್ಯಾಡರಹಳ್ಳಿಯ ಸಾವಯವ ಕೃಷಿಕರು, ಪ್ರಗತಿಪರ ರೈತರು ಮತ್ತು ಪಾರಂಪರಿಕ ವೈದ್ಯರಾದ ಶ್ರೀಯುತ ರವಿಶಂಕರ್ ಅವರು ಆಗಮಿಸಿದ್ದರು. ಸಂಸ್ಥೆಯಲ್ಲಿ ರೈತರಿಂದ ಗಿಡ ನೆಡುವುದರ ಮೂಲಕ ರೈತರ ದಿನವನ್ನು ಉದ್ಘಾಟಿಸಲಾಯಿತು. ಸಾವಯವ ಕೃಷಿಯನ್ನು ಉದ್ದೇಶಿಸಿ ಮಾತನಾಡಿದ ಇವರು ವಿದ್ಯಾರ್ಥಿಗಳಿಗೆ ಸಾವಯವ ಕೃಷಿಯ ಕ್ರಮಗಳು, ಆರೋಗ್ಯಕರ ಪ್ರಯೋಜನಗಳನ್ನು ವಿವರಿಸುತ್ತಾ, ಬೆಳೆಗೆ ಯಾವುದೇ ರಾಸಾಯನಿಕ ಗೊಬ್ಬರಗಳು, ಕೀಟನಾಶಕಗಳನ್ನು ಬಳಸದೇ ಕೇವಲ ಹಸುವಿನ ಸಗಣಿ ಮತ್ತು ಗಂಜುಳದಿಂದ ರಸಗೊಬ್ಬರ ಮತ್ತು ಸಾವಯವ ಕೀಟನಾಶಕವನ್ನು ತಯಾರಿಸಿ ಮಣ್ಣಿನ ಫಲವತ್ತತೆಯನ್ನು ಹೇಗೆ ಹೆಚ್ಚಿಸುವುದು ಮತ್ತು ಯಾವ ಕಾಲ, ನಕ್ಷತ್ರ, ಹವಾಮಾನ ಮತ್ತು ಮಾಸಕ್ಕನುಗುಣವಾಗಿ ಯಾವ ಬೆಳೆ ಬೆಳೆಯಬೇಕೆಂಬುದನ್ನು ರೈತರು ಸೂಕ್ತವಾಗಿ ಅರಿತಿರಬೇಕು ಮತ್ತು ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಗೊಳಿಸಿಕೊಳ್ಳ

ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನ ಆಚರಣೆ.

ಹಾಸನ ತಾಲ್ಲೂಕಿನ ಮೊಸಳೆಹೊಸಹಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕದ ವತಿಯಿಂದ ರೆಡ್ ರಿಬ್ಬನ್ ಕ್ಲಬ್ ಸಹಯೋಗದೊಂದಿಗೆ, ವಿಶ್ವ ಏಡ್ಸ್ ದಿನದ ಪ್ರಯುಕ್ತ ಸಂಸ್ಥೆಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.. . ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಾಸನ ಜಿಲ್ಲಾ ಏಡ್ಸ್ ಪ್ರಿವೆನ್ಷನ್ ಮತ್ತು ಕಂಟ್ರೋಲ್ ಘಟಕದ ಸೂಪರ್ವೈಸರ್ ಶ್ರೀಯುತ ರವಿಕುಮಾರ್ ವಿ. ಬಲ್ಲೇನಹಳ್ಳಿ ಯವರು ಮತ್ತು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀಯುತ ನಾಗೇಶ್ ರವರು ಹೆಚ್.ಐ.ವಿ. ಸೋಂಕಿನ ಬಗ್ಗೆ ವಿದ್ಯಾರ್ಥಿಗಳಿಗೆ ಸಂಕ್ಷಿಪ್ತ ಮಾಹಿತಿ ನೀಡುವ ಮೂಲಕ ಜಾಗೃತಿ ಮೂಡಿಸಿದರು.  ಮುಂದುವರೆದು ಸಂಸ್ಥೆಯಲ್ಲಿ ಏಡ್ಸ್/ಹೆಚ್.ಐ.ವಿ. ಸೋಂಕಿನ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸವಾಗಿ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಪೋಸ್ಟರ್ ಡಿಸೈನ್ ಮತ್ತು ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು ಮತ್ತು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು ಸಂಸ್ಥೆಯ ಎನ್.ಎಸ್.ಎಸ್. ಅಧಿಕಾರಿಗಳಾದ ಶ್ರೀಯುತ ವೀರಭದ್ರಸ್ವಾಮಿ ಕೆ.ಎಂ. ರವರು, ಎನ್.ಎಸ್.ಎಸ್. ಚಟುವಟಿಕೆಯ ಅಡಿಯಲ್ಲಿ ವಿದ್ಯಾರ್ಥಿಗಳು ಸುತ್ತಮುತ್ತಲ, ಮೂರು ಗ್ರಾಮಗಳನ್ನು ದತ್ತು ಪಡೆದು ಸ್ವಚ್ಛತೆ, ಆರೋಗ್ಯ, ಉನ್ನತ ಶಿಕ್ಷಣ ಮುಂತಾದ ವಿಷಯಗಳ ಬಗ್ಗೆ ಜಾಗೃತಿ

ಹಾಸನ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗಾವಕಾಶಗಳು.

ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ನೆಲೆಸಿರುವ ಗೃಹಿಣಿಯರು, ನಿವೃತ್ತ ಅಧಿಕಾರಿಗಳು /ನೌಕರರು ಮತ್ತು ನಿರುದ್ಯೋಗಿಗಳಿಗೆ ಆರ್ಥಿಕ ವಲಯದಲ್ಲಿ ಹೂಡಿಕೆ ಇಲ್ಲದೆ ವೃತ್ತಿ ಅವಕಾಶಗಳು / ವ್ಯಾಪಾರ ಅವಕಾಶಗಳು  ಪುರುಷ ಮತ್ತು  ಮಹಿಳೆಯರಿಗೆ   ವಯಸ್ಸಿನ ಮಿತಿ: - 25 ರಿಂದ 65 ವರ್ಷಗಳು.  ದಯವಿಟ್ಟು ನಿಮ್ಮ ವಿವರಗಳನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ.  freelanceadvertisingthassan@gmail.com  ಅಥವಾ  ಸಂಪರ್ಕಿಸಿ  7090899728 Career opportunities /business opportunities with out an investments in financial sector for housewives ,retired officials /employees and unemployed persons residing in Hassan district, Karnataka state India For both male and female. Age limit:- 25 to 65 years. Please send your details to below email id. freelanceadvertisingathassan@gmail.com Or  Contact  070908 99728