ಕುಡಿಯುವ ನೀರಿಗೆ ಮುಂಜಾಗ್ರತೆ ವಹಿಸಲು ಸೂಚನೆ ಹಾಸನ. (ಕರ್ನಾಟಕ ವಾರ್ತೆ ). ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದಾಗಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಹಿಸಲು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ವೇತಾ ದೇವರಾಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ನಡೆದ ಕೆ.ಡಿ.ಪಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಔಷಧಿಗಳನ್ನು ಒದಗಿಸುವಂತೆ ಸೂಚಿಸಿದರಲ್ಲದೆ, ಮುಂಗಾರು ಮಳೆಯಿಂದ ಕೆಲವು ಬೆಳೆಗಳು ನಾಶವಾಗಿದ್ದು, ಬೆಳೆ ವಿಮೆ ಪಡೆಯಲು ಸಹಕಾರಿಯಾಗುವಂತೆ ತಾಲೂಕುಗಳಿಗೆ ಖುದ್ದು ಭೇಟಿ ನೀಡಿ ಸಮೀಕ್ಷೆ ನಡೆಸಿ ನಿಖರವಾದ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೃಷಿ ಉತ್ಪನ್ನ ಸಂಸ್ಕರಣೆಗೆ ಟಾರ್ಪಲ್‍ಗಳ ಬೇಡಿಕೆ ಹೆಚ್ಚಾಗುತ್ತಿದ್ದು ಅವುಗಳನ್ನು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ವಿತರಿಸಿ ಎಂದು ಅಧ್ಯಕ್ಷರು ಹೇಳಿದರು. ಬೆಳೆ ವಿಮೆ ಸಂಬಂಧಿಸಿದಂತೆ ಯಾವೆಲ್ಲ ಬೆಳೆಗಳು ಹಾನಿಯಾಗಿವೆ ಅವುಗಳ ಮಾಹಿತಿ ನೀಡಿ ಎಂದರಲ್ಲದೆ ಬೆಳೆ ಕಟಾವು ಸಮಯದಲ್ಲಿ ಆಯಾ ಸ್ಥಳಗಳನ್ನು ಖುದ್ದಾಗಿ ಭೇಟಿ ನೀಡಿ ಹಾಗೂ ಪ್ರತಿ ವರ್ಷ ಪ್ರತಿ ಹಳ್ಳಿಗಳಲ್ಲೂ ಬೆಳೆ ಕಟಾವು ಸಮೀಕ್ಷೆ ಯಾಗಬೇಕು ಎಂದರು. ಜಾನುವಾರುಗಳಿಗೆ ಯಾವುದೇ ರೋಗ ರುಜಿನಗಳು ಬಾರದಂತ...