ರಾಜಭವನದಲ್ಲಿ ಸನ್ಮಾನ್ಯ ರಾಜ್ಯಪಾಲರಿಂದ ಸಂವಿಧಾನ ಶಿಲ್ಪಿ ಭಾರತರತ್ನ ಶ್ರೀ ಡಾ||ಬಿ ಆರ್ ಅಂಬೇಡ್ಕರ್ ರವರ ಕಂಚಿನ ಪುತ್ಥಳಿ ಅನಾವರಣ.
ಸಂವಿಧಾನ ಶಿಲ್ಪಿ ಭಾರತರತ್ನ ಶ್ರೀ ಡಾ|| ಬಿ ಆರ್ ಅಂಬೇಡ್ಕರ್ ಅವರ ಕಂಚಿನ ಪುತ್ಥಳಿ ಅನಾವರಣ.
ರಾಜಭವನದಲ್ಲಿ ನೂತನವಾಗಿ ಪ್ರತಿಷ್ಠಾಪಿಸಲಾದ ಸಂವಿಧಾನ ಶಿಲ್ಪಿ, ಭಾರತರತ್ನ ಶ್ರೀ ಡಾ.ಬಿ.ಆರ್.ಅಂಬೇಡ್ಕರ್ ಅವರ ಕಂಚಿನ ಪುತ್ಥಳಿಯನ್ನು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅನಾವರಣಗೊಳಿಸಿದರು.
ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ್ ಎಸ್ ಬೊಮ್ಮಾಯಿ ಮಾನ್ಯ ವಿಧಾನಸಭಾಧ್ಯಕ್ಷ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾನ್ಯ ವಿಧಾನಪರಿಷತ್ ಸಭಾಪತಿ ಶ್ರೀ ರಘುನಾಥರಾವ್ ಮಲ್ಕಾಪುರೆ, ಮಾನ್ಯ ಗೃಹ ಸಚಿವ ಶ್ರೀ ಅರಗ ಜ್ಞಾನೇಂದ್ರ ರಾಜ್ಯ ಸರ್ಕಾರದ ನಿಯೋಜಿತ ಮುಖ್ಯ ಕಾರ್ಯದರ್ಶಿ ಶ್ರೀಮತಿ ವಂದಿತಾ ಶರ್ಮಾ, ಸಿಎಂ ಪ್ರಧಾನ ಕಾರ್ಯದರ್ಶಿ ಶ್ರೀ ಮಂಜುನಾಥ ಪ್ರಸಾದ್, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಬಿ.ಹೆಚ್.ಅನಿಲ್ ಕುಮಾರ್ ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಶ್ರೀ ಬಸವರಾಜ್ ಎಸ್ ಬೊಮ್ಮಾಯಿ ಅವರಿಂದ ಗೌರವ ಮಾಲಾರ್ಪಣೆ
ಕೃಪೆ-
ವಾರ್ತಾ ಮತ್ತು ಜನಸಂಪರ್ಕ ಇಲಾಖೆ .
ಕರ್ನಾಟಕ ಸರ್ಕಾರ.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ
Vimarsha.info