ವಿಷಯಕ್ಕೆ ಹೋಗಿ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಪಿಎಂ ಕೇರ್ಸ್ ಫಂಡ್ ಟ್ರಸ್ಟ್ ಮಂಡಳಿಯ ಸಭೆ.

ಪಿಎಂ ಕೇರ್ಸ್ ಫಂಡ್ ಟ್ರಸ್ಟ್
ಪ್ರಧಾನಿ ಅಧ್ಯಕ್ಷತೆಯಲ್ಲಿ ಪಿಎಂ ಕೇರ್ಸ್ ನಿಧಿಯ ಟ್ರಸ್ಟಿ ಮಂಡಳಿಯ ಸಭೆ.



ಪಿಎಂ ಕೇರ್ಸ್ ನಿಧಿಗೆ ಹೃದಯಪೂರ್ವಕವಾಗಿ ದೇಣಿಗೆ ನೀಡುತ್ತಿರುವ ಭಾರತೀಯರನ್ನು ಶ್ಲಾಘಿಸಿದ ಪ್ರಧಾನಿ
ಪಿಎಂ ಕೇರ್ಸ್ ತುರ್ತು ಮತ್ತು ಸಂಕಷ್ಟದ ಸಂದರ್ಭಗಳಲ್ಲಿ ಸ್ಪಂದಿಸುವ ಬಹುದೊಡ್ಡ ದೂರದೃಷ್ಟಿಯೊಂದಿಗೆ ಕಾರ್ಯನಿರ್ವಹಿಸುವುದಲ್ಲದೆ, ಪರಿಹಾರ ಸಹಾಯ ಒದಗಿಸುತ್ತದೆ ಮತ್ತು ಸಂಕಷ್ಟ ತಗ್ಗಿಸುವ ಕ್ರಮಗಳು ಮತ್ತು ಸಾಮರ್ಥ್ಯ ವೃದ್ಧಿಯನ್ನೂ ಸಹ ಮಾಡುತ್ತದೆ
ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಗೌರವಾನ್ವಿತ ನ್ಯಾ. ಕೆ.ಟಿ.ಥಾಮಸ್, ಮಾಜಿ ಡೆಪ್ಯೂಟಿ ಸ್ಪೀಕರ್ ಶ್ರೀ ಕರಿಯಾ ಮುಂಡಾ ಮತ್ತು ಶ್ರೀ ರತನ್ ಟಾಟಾ ಪಿಎಂ ಕೇರ್ಸ್ ನಿಧಿಯ ಟ್ರಸ್ಟಿಗಳಾಗಿ ಸಭೆಯಲ್ಲಿ ಭಾಗಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಧ್ಯಕ್ಷತೆಯಲ್ಲಿ 20.09.2022 ರಂದು ಪಿಎಂ ಕೇರ್ಸ್ ನಿಧಿಯ ಟ್ರಸ್ಟಿ ಮಂಡಳಿಯ ಸಭೆ ನಡೆಯಿತು. 
4345 ಮಕ್ಕಳಿಗೆ ನೆರವು ನೀಡುತ್ತಿರುವ ಮಕ್ಕಳಿಗಾಗಿ ಪಿಎಂ ಕೇರ್ಸ್ ಯೋಜನೆ ಸೇರಿದಂತೆ ಪಿಎಂ ಕೇರ್ಸ್ ನಿಧಿಯ ಸಹಾಯದಿಂದ ಕೈಗೊಂಡ ನಾನಾ ಉಪಕ್ರಮಗಳ ಕುರಿತು ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು. ದೇಶದ ಅತ್ಯಂತ ನಿರ್ಣಾಯಕ ಸಮಯದಲ್ಲಿ ನಿಧಿಯು ನಿರ್ವಹಿಸಿದ ಪಾತ್ರವನ್ನು ಟ್ರಸ್ಟಿಗಳು ಶ್ಲಾಘಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಿಎಂ ಕೇರ್ಸ್ ನಿಧಿಗೆ  ಹೃದಯಪೂರ್ವಕವಾಗಿ ದೇಣಿಗೆ ನೀಡಿದ್ದಕ್ಕಾಗಿ ದೇಶದ ಜನರನ್ನು ಶ್ಲಾಘಿಸಿದರು.
ಪಿಎಂ ಕೇರ್ಸ್ ನಿಧಿ, ತುರ್ತು ಮತ್ತು ಸಂಕಷ್ಟದ ಸಂದರ್ಭಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸುವ ಬಹು ದೊಡ್ಡ ದೂರದೃಷ್ಟಿಯನ್ನು ಹೊಂದಿರುವುದು ಮಾತ್ರವಲ್ಲದೆ, ಪರಿಹಾರ ಸಹಾಯದ ಮೂಲಕ ಸಂಕಷ್ಟ ತಗ್ಗಿಸುವ ಕ್ರಮಗಳು ಮತ್ತು ಸಾಮರ್ಥ್ಯವೃದ್ಧಿಯ ಬಗ್ಗೆಯೂ ಗಮನಹರಿಸುತ್ತದೆ ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಪಿಎಂ ಕೇರ್ಸ್ ಫಂಡ್‌ನ ಅವಿಭಾಜ್ಯ ಅಂಗವಾಗುವಂತೆ ಪ್ರಧಾನಮಂತ್ರಿ ಟ್ರಸ್ಟಿಗಳನ್ನು ಸ್ವಾಗತಿಸಿದರು. 
ಸಭೆಯಲ್ಲಿ ಪಿಎಂ ಕೇರ್ಸ್ ನಿಧಿಯ ಟ್ರಸ್ಟಿಗಳು, ಅಂದರೆ ಕೇಂದ್ರ ಗೃಹ ಸಚಿವರು ಮತ್ತು ಕೇಂದ್ರ ಹಣಕಾಸು ಸಚಿವರು ಮತ್ತು ಪಿಎಂ ಕೇರ್ಸ್ ನಿಧಿಗೆ ಹೊಸದಾಗಿ ನಾಮನಿರ್ದೇಶನಗೊಂಡ ಟ್ರಸ್ಟಿಗಳು ಭಾಗವಹಿಸಿದ್ದರು:

•    ನ್ಯಾ. ಕೆ.ಟಿ.ಥಾಮಸ್, ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ
•    ಶ್ರೀ ಕರಿಯಾ ಮುಂಡಾ, ಮಾಜಿ ಡೆಪ್ಯೂಟಿ ಸ್ಪೀಕರ್
•     ಶ್ರೀ ರತನ್ ಟಾಟಾ, ಅಧ್ಯಕ್ಷರು, ಎಮೆರಿಟಸ್, ಟಾಟಾ ಸನ್ಸ್ 

ಪಿಎಂ ಕೇರ್ಸ್ ನಿಧಿಗೆ ಸಲಹಾ ಮಂಡಳಿಯ ರಚನೆಗೆ ಕೆಳಗಿನ ಗಣ್ಯ ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡಲು ಟ್ರಸ್ಟ್ ನಿರ್ಧರಿಸಿತು. 

•    ಶ್ರೀ ರಾಜೀವ್ ಮೆಹರ್ಷಿ, ಭಾರತದ ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್
•    ಶ್ರೀಮತಿ ಸುಧಾಮೂರ್ತಿ,ಮಾಜಿ ಅಧ್ಯಕ್ಷರು, ಇನ್ಫೋಸಿಸ್ ಫೌಂಡೇಷನ್ 
•    ಶ್ರೀ ಆನಂದ್ ಶಾ, ಟೀಚ್ ಫಾರ್ ಇಂಡಿಯಾದ ಸಹ ಸಂಸ್ಥಾಪಕರು ಮತ್ತು ಇಂಡಿಕಾರ್ಪ್ಸ್ ಮತ್ತು ಪಿರಾಮಲ್ ಫೌಂಡೇಶನ್‌ನ ಮಾಜಿ ಸಿಇಒ. 

ಹೊಸ ಟ್ರಸ್ಟಿಗಳು ಮತ್ತು ಸಲಹೆಗಾರರ ಪಾಲ್ಗೊಳ್ಳುವಿಕೆಯು ಪಿಎಂ ಕೇರ್ಸ್ ಫಂಡ್‌ನ ಕಾರ್ಯಚಟುವಟಿಕೆಗೆ ವ್ಯಾಪಕ ದೂರದೃಷ್ಟಿಯನ್ನು ಒದಗಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ಸಾರ್ವಜನಿಕ ಜೀವನದ ಅವರ ಅಪಾರ ಅನುಭವವು ನಾನಾ ಸಾರ್ವಜನಿಕ ಅಗತ್ಯತೆಗಳಿಗೆ ನಿಧಿಯನ್ನು ಹೆಚ್ಚು ಸ್ಪಂದಿಸುವಂತೆ ಮಾಡುವಲ್ಲಿ ಮತ್ತಷ್ಟು ಚೈತನ್ಯ ನೀಡಲಿದೆ. 

ಕೃಪೆ:-ಪಿಐಬಿ
 

******


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ರೈತ ದಿನ ಆಚರಣೆ-ಸಾವಯವ ಕೃಷಿ ಪದ್ಧತಿಗೆ ಸಲಹೆ.

👇👇👇👇👇👇👇👇👇👇👇👇👇 ರೈತ ದಿನಾಚರಣೆ https://youtube.com/shorts/EGX4c_IVzY8?si=erkB19_6MH0KmBG6 ಮೊಸಳೆಹೊಸಹಳ್ಳಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ರಾಷ್ಟ್ರೀಯ ರೈತರ ದಿನದ ಅಂಗವಾಗಿ ಸಾವಯವ ಕೃಷಿ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಪುಣ್ಯಭೂಮಿ ಪರಿಸರ ಪ್ರಶಸ್ತಿ ಮತ್ತು ಶ್ರೇಷ್ಠ ಕೃಷಿಕ ಪ್ರಶಸ್ತಿ ಪುರಸ್ಕೃತರಾದ ಕಟ್ಟಾಯ ಹೋಬಳಿಯ ಬ್ಯಾಡರಹಳ್ಳಿಯ ಸಾವಯವ ಕೃಷಿಕರು, ಪ್ರಗತಿಪರ ರೈತರು ಮತ್ತು ಪಾರಂಪರಿಕ ವೈದ್ಯರಾದ ಶ್ರೀಯುತ ರವಿಶಂಕರ್ ಅವರು ಆಗಮಿಸಿದ್ದರು. ಸಂಸ್ಥೆಯಲ್ಲಿ ರೈತರಿಂದ ಗಿಡ ನೆಡುವುದರ ಮೂಲಕ ರೈತರ ದಿನವನ್ನು ಉದ್ಘಾಟಿಸಲಾಯಿತು. ಸಾವಯವ ಕೃಷಿಯನ್ನು ಉದ್ದೇಶಿಸಿ ಮಾತನಾಡಿದ ಇವರು ವಿದ್ಯಾರ್ಥಿಗಳಿಗೆ ಸಾವಯವ ಕೃಷಿಯ ಕ್ರಮಗಳು, ಆರೋಗ್ಯಕರ ಪ್ರಯೋಜನಗಳನ್ನು ವಿವರಿಸುತ್ತಾ, ಬೆಳೆಗೆ ಯಾವುದೇ ರಾಸಾಯನಿಕ ಗೊಬ್ಬರಗಳು, ಕೀಟನಾಶಕಗಳನ್ನು ಬಳಸದೇ ಕೇವಲ ಹಸುವಿನ ಸಗಣಿ ಮತ್ತು ಗಂಜುಳದಿಂದ ರಸಗೊಬ್ಬರ ಮತ್ತು ಸಾವಯವ ಕೀಟನಾಶಕವನ್ನು ತಯಾರಿಸಿ ಮಣ್ಣಿನ ಫಲವತ್ತತೆಯನ್ನು ಹೇಗೆ ಹೆಚ್ಚಿಸುವುದು ಮತ್ತು ಯಾವ ಕಾಲ, ನಕ್ಷತ್ರ, ಹವಾಮಾನ ಮತ್ತು ಮಾಸಕ್ಕನುಗುಣವಾಗಿ ಯಾವ ಬೆಳೆ ಬೆಳೆಯಬೇಕೆಂಬುದನ್ನು ರೈತರು ಸೂಕ್ತವಾಗಿ ಅರಿತಿರಬೇಕು ಮತ್ತು ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಗೊಳಿಸಿಕೊಳ್ಳ

ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನ ಆಚರಣೆ.

ಹಾಸನ ತಾಲ್ಲೂಕಿನ ಮೊಸಳೆಹೊಸಹಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಘಟಕದ ವತಿಯಿಂದ ರೆಡ್ ರಿಬ್ಬನ್ ಕ್ಲಬ್ ಸಹಯೋಗದೊಂದಿಗೆ, ವಿಶ್ವ ಏಡ್ಸ್ ದಿನದ ಪ್ರಯುಕ್ತ ಸಂಸ್ಥೆಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.. . ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಾಸನ ಜಿಲ್ಲಾ ಏಡ್ಸ್ ಪ್ರಿವೆನ್ಷನ್ ಮತ್ತು ಕಂಟ್ರೋಲ್ ಘಟಕದ ಸೂಪರ್ವೈಸರ್ ಶ್ರೀಯುತ ರವಿಕುಮಾರ್ ವಿ. ಬಲ್ಲೇನಹಳ್ಳಿ ಯವರು ಮತ್ತು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀಯುತ ನಾಗೇಶ್ ರವರು ಹೆಚ್.ಐ.ವಿ. ಸೋಂಕಿನ ಬಗ್ಗೆ ವಿದ್ಯಾರ್ಥಿಗಳಿಗೆ ಸಂಕ್ಷಿಪ್ತ ಮಾಹಿತಿ ನೀಡುವ ಮೂಲಕ ಜಾಗೃತಿ ಮೂಡಿಸಿದರು.  ಮುಂದುವರೆದು ಸಂಸ್ಥೆಯಲ್ಲಿ ಏಡ್ಸ್/ಹೆಚ್.ಐ.ವಿ. ಸೋಂಕಿನ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸವಾಗಿ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಪೋಸ್ಟರ್ ಡಿಸೈನ್ ಮತ್ತು ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು ಮತ್ತು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು ಸಂಸ್ಥೆಯ ಎನ್.ಎಸ್.ಎಸ್. ಅಧಿಕಾರಿಗಳಾದ ಶ್ರೀಯುತ ವೀರಭದ್ರಸ್ವಾಮಿ ಕೆ.ಎಂ. ರವರು, ಎನ್.ಎಸ್.ಎಸ್. ಚಟುವಟಿಕೆಯ ಅಡಿಯಲ್ಲಿ ವಿದ್ಯಾರ್ಥಿಗಳು ಸುತ್ತಮುತ್ತಲ, ಮೂರು ಗ್ರಾಮಗಳನ್ನು ದತ್ತು ಪಡೆದು ಸ್ವಚ್ಛತೆ, ಆರೋಗ್ಯ, ಉನ್ನತ ಶಿಕ್ಷಣ ಮುಂತಾದ ವಿಷಯಗಳ ಬಗ್ಗೆ ಜಾಗೃತಿ

ಹಾಸನ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗಾವಕಾಶಗಳು.

ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ನೆಲೆಸಿರುವ ಗೃಹಿಣಿಯರು, ನಿವೃತ್ತ ಅಧಿಕಾರಿಗಳು /ನೌಕರರು ಮತ್ತು ನಿರುದ್ಯೋಗಿಗಳಿಗೆ ಆರ್ಥಿಕ ವಲಯದಲ್ಲಿ ಹೂಡಿಕೆ ಇಲ್ಲದೆ ವೃತ್ತಿ ಅವಕಾಶಗಳು / ವ್ಯಾಪಾರ ಅವಕಾಶಗಳು  ಪುರುಷ ಮತ್ತು  ಮಹಿಳೆಯರಿಗೆ   ವಯಸ್ಸಿನ ಮಿತಿ: - 25 ರಿಂದ 65 ವರ್ಷಗಳು.  ದಯವಿಟ್ಟು ನಿಮ್ಮ ವಿವರಗಳನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ.  freelanceadvertisingthassan@gmail.com  ಅಥವಾ  ಸಂಪರ್ಕಿಸಿ  7090899728 Career opportunities /business opportunities with out an investments in financial sector for housewives ,retired officials /employees and unemployed persons residing in Hassan district, Karnataka state India For both male and female. Age limit:- 25 to 65 years. Please send your details to below email id. freelanceadvertisingathassan@gmail.com Or  Contact  070908 99728