ಮೂಲ ಲೇಖನ:- ವಿವೇಕಾನಂದ .ಎಚ್.ಕೆ ಕಮ್ಯುನಿಸ್ಟ್ ಜಗತ್ತಿನ ಗ್ಲಾಮರಸ್ ಹೀರೋ ಆರ್ನೆಸ್ಟ್ ಚೆಗುವಾರ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಹೇಳುತ್ತಾ.........ಜೂನ್ 14......... ಬಂಡವಾಳ ಶಾಹಿ ವ್ಯವಸ್ಥೆಯ ಕಾರ್ಪೊರೇಟ್ ಸಂಸ್ಕೃತಿ ಬಹುತೇಕ ಇಡೀ ಜಗತ್ತನ್ನು ಆಕ್ರಮಿಸಿರುವಾಗ, ಜಾಗತೀಕರಣದ ಮುಕ್ತ ಮಾರುಕಟ್ಟೆಯ ಹೊಸ ಪೀಳಿಗೆ ಮುಖ್ಯವಾಹಿನಿಯಲ್ಲಿ ಮಹತ್ವ ಪಡೆದಿರುವಾಗ ಕಾರ್ಲ್ ಮಾರ್ಕ್ಸ್, ಮಾವೋ, ಸ್ಟಾಲಿನ್, ಕ್ಯಾಸ್ಟ್ರೋ ಮುಂತಾದವರು ಈ ಕೊಳ್ಳುಬಾಕ ಸಂಸ್ಕೃತಿಯ ಜನರ ನಡುವೆ ವಿಲನ್ ರೀತಿಯಲ್ಲಿ ಬಿಂಬಿತವಾಗುತ್ತಿರುವಾಗ, ಬಹುತೇಕ ಯುವ ಸಮೂಹ ಸಂಪರ್ಕ ಕ್ರಾಂತಿಯ ಪರಿಣಾಮವಾಗಿ ಸೂಕ್ಷ್ಮತೆ ಕಳೆದುಕೊಂಡಿರುವಾಗ, ಈಗಲೂ ಈ ವ್ಯವಸ್ಥೆಯ ಬಂಡಾಯಗಾರರಿಗೆ " ಚೆ " ಅತ್ಯಂತ ಆಕರ್ಷಕ ಮತ್ತು ಸ್ಪೂರ್ತಿದಾಯಕವಾಗಿದ್ದಾರೆ. ಚೆಗುವಾರ ಅವರ ಹೋರಾಟದ ಹಾದಿಯನ್ನು ಮೆಚ್ಚುತ್ತಲೇ ಅವರ ಅಭಿಮಾನಿಗಳಾಗಿ ಈಗಲೂ ಸಾಮಾಜಿಕ ಜಾಲತಾಣಗಳ ಪ್ರೊಫೈಲ್ ಪಿಕ್ಚರ್ ಚೆಗುವಾರ ಆಗಿರುವುದನ್ನು ಕಾಣಬಹುದು. ಆಧುನಿಕ ಸಂಕೀರ್ಣ ಜೀವನಶೈಲಿಯ ಮೋಹಕ್ಕೆ ಒಳಗಾಗಿ ವಸ್ತು ಸಂಸ್ಕೃತಿ ಮಾನವೀಯ ಮೌಲ್ಯಗಳನ್ನು ವ್ಯಾಪಾರವಾಗಿಸಿರುವಾಗ ಪ್ರತಿಯೊಬ್ಬರು ಕಮ್ಯುನಿಸ್ಟರೇ. ಆದರೆ ಕಾರಣ ಮತ್ತು ರೂಪಗಳು - ಸ್ವರೂಪಗಳು ಮಾತ್ರ ಭಿನ್ನ. ಇಡೀ ಸ...
News/information/advertising/entertainment