ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

#ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ-ಹಾಸನ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಹಾಸನ : - ದೇಶದ ಅಭಿವೃದ್ಧಿಗೆ ಸಾಕ್ಷರತೆ ಮುಖ್ಯ :- ಜಿಲ್ಲಾಧಿಕಾರಿ ಆರ್ ಗಿರೀಶ್

ದೇಶದ ಅಭಿವೃದ್ಧಿಗೆ ಸಾಕ್ಷರತೆ ಮುಖ್ಯ: ಜಿಲ್ಲಾಧಿಕಾರಿ ಆರ್. ಗಿರೀಶ್ ಹಾಸನ,ಸೆ.22                        (ಕರ್ನಾಟಕ ವಾರ್ತೆ):-                  ಒಂದು ದೇಶ ಸಮೃದ್ಧವಾಗಬೇಕಾದರೆ ಸಾಕ್ಷರತೆ ಮುಖ್ಯ. ಪ್ರತಿಯೊಬ್ಬ ವ್ಯಕ್ತಿಯು ತಮ್ಮಲ್ಲಿರುವ ಜ್ಞಾನವನ್ನು ಸುತ್ತಮತ್ತಲ ಜನರಿಗೆ ಹಂಚುವ ಮೂಲಕ ಅರಿವು ಮೂಡಿಸಿದರೆ ದೇಶ ಅಭಿವೃದ್ಧಿ ಹೊಂದುತ್ತದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಲ್ಲಿಂದು ಏರ್ಪಡಿಸಿದ್ದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ದೇಶಕ್ಕೆ ಸ್ವಾತಂತ್ರ್ಯ ಬಂದ ಸಮಯದಲ್ಲಿ ಹೆಚ್ಚು ಅಶಿಕ್ಷಿತರಿದ್ದು, ಇಂದಿನ ದೇಶದಲ್ಲಿಂದು ಸಾಕ್ಷರತಾ ಪ್ರಮಾಣ ಶೇ.77 ರಷ್ಟಿದೆ ಇದು ಶೇ.100ಕ್ಕೆ ಏರಬೇಕು ಎಂದರು. ಜನರಲ್ಲಿನ ಅಜ್ಞಾನ, ಅಂದಕಾರ, ಮೌಡ್ಯ ಹಾಗೂ ಮೂಡನಂಬಿಕೆಗಳನ್ನು ಹೋಗಲಾಡಿಸಲು ಜ್ಞಾನ ಮುಖ್ಯ ಹಾಗಾಗಿ ಅನಕ್ಷರಸ್ತರಿಗೆ ಶಿಕ್ಷಣ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಉತ್ತಮ ಶಿಕ್ಷಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾದ್ಯ ಹಾಗಾಗಿ ಜನರಲ್ಲಿ ಸಾಕ್ಷರತೆಯ ಅರಿವು ಮೂಡಿಸುವುದರ ಜೊತೆಗೆ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಬಗ್ಗೆ ತಿಳಿಸಿದರೆ ದೇಶವು ಪ್ರಗತಿಯ ಪಥದತ್ತ ಸಾಗುತ್ತದೆ ಎಂದು ಆರ್. ಗಿರೀಶ್ ಅವರು ತಿಳಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ.