ಆತ್ಮಹತ್ಯೆ ತಟೆಗಟ್ಟಲು ಪ್ರಚಾರ ವಾಹನಕ್ಕೆ ಚಾಲನೆ :- ಹಾಸನ.ಸೆ.10(ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಂದು ವಿಶ್ವ ಆತ್ಮಹತ್ಯೆ ತಟೆಗಟ್ಟುವ ದಿನದ ಅಂಗವಾಗಿ ಆತ್ಮಹತ್ಯೆ ತಡೆಗಟ್ಟುವ ಕುರಿತು ಸಾರ್ವಜನಿಕರಿಗೆ ಪ್ರಚಾರ ಅರಿವು ಮೂಡಿಸುವ ನಿಟ್ಟಿನಲ್ಲಿ ವಾಹನಕ್ಕೆ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕವಿತ ರಾಜರಾಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜು, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ|| ವೇಣುಗೋಪಾಲ್, ಹಿಮ್ಸ್ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ|| ಸಂತೋಷ್ ಹಾಗೂ ಮತ್ತಿತರರು ಹಾಜರಿದ್ದರು. ಸಂಪಾದಕರು ಹರೀಶ್ ಹೆಚ್ ಆರ್ ...
News/information/advertising/entertainment