ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

#ಕ್ರೀಡೆ -ಪೋಲೀಸ್ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಒತ್ತಡದ ಕೆಲಸಗಳಿಗೆ ಕ್ರೀಡೆಗಳಿಂದ ಚೈತನ್ಯ :-ನ್ಯಾಯಮೂರ್ತಿ ನಾರಾಯಣ ದಾಸ್.

ಒತ್ತಡದ ಕೆಲಸಗಳಿಗೆ ಕ್ರೀಡೆಗಳಿಂದ ಚೈತನ್ಯ : ನ್ಯಾ. ನಾರಾಯಣ ಪ್ರಸಾದ್ ಹಾಸನ ಮಾ.05 (ಕರ್ನಾಟಕ ವಾರ್ತೆ):- ಸದಾ ಒತ್ತಡದಲ್ಲಿ ಕೆಲಸ ಮಾಡುವ ಪೊಲೀಸರಿಗೆ ದೈಹಿಕ ಹಾಗೂ ಮಾನಸಿಕ ಸಾಮಥ್ರ್ಯ ಮತ್ತು ಉತ್ತಮ ವ್ಯಕ್ತಿತ್ವ ರೂಪಿಸಲು ಹಾಗೂ ವೃತ್ತಿಯಲ್ಲಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಕ್ರೀಡೆ ಹೆಚ್ಚು ಸಹಕಾರಿಯಾಗಲಿದೆ ಎಂದು 2ನೇ ಹೆಚ್ಚುವರಿ ಹಾಗೂ ಜಿಲ್ಲಾ ಸತ್ರ ನ್ಯಾಯಾಧೀಶರಾದ ನಾರಾಯಣ ಪ್ರಸಾದ್ ಅವರು ತಿಳಿಸಿದ್ದಾರೆ. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಹಾಸನ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಪೊಲೀಸರ ಆರೋಗ್ಯ ಪೊಲೀಸರಿಗಿಂತ ಹೆಚ್ಚಾಗಿ ಸಮಾಜಕ್ಕೆ ಬಹುಮುಖ್ಯವಾದದ್ದು ಎಂದು ಹೇಳಿದರು. ಪೊಲೀಸರು ಕೆಲ ಸಮಯವಾದರು ಕ್ರೀಡೆಯಲ್ಲಿ ಭಾಗವಹಿಸುವುದರಿಂದ್ದ ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯದಲ್ಲಿ ಚೇತರಿಕೆ ಹಾಗೂ ಚೈತನ್ಯ ತುಂಬಲಿದೆ ಎಂದರು. ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಮಾತನಾಡಿ ಸರ್ಕಾರದ ಅನೇಕ ಇಲಾಖೆಗಳು ಹಾಗೂ ಕಂದಾಯ ಮತ್ತು ಪೊಲೀಸ್ ಇಲಾಖೆ ನಾನಾ ಸಂದರ್ಭದಲ್ಲಿ ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು. ಹೆಚ್ಚಾಗಿ ಚುನಾವಣೆ ಸಂದರ್ಭದಲ್ಲಿ ಕಂದಾಯ ಇಲಾಖೆಯೊಂದಿಗೆ ಪೊಲೀಸ್ ಇಲಾಖೆಯ ಪಾತ್ರ ಬಹುಮುಖ್ಯವಾದುದು. ಕೆಲಸದ ಒತ್ತಡವನ್ನು ಮರೆತು ಕ್ರೀಡೆಯ ಕಡೆಯೂ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠ