ಕೋವಿಡ್ ನಿಯಂತ್ರಿಸಲು ಶ್ರಮಿಸುತ್ತಿರುವ ಅಧಿಕಾರಿಗಳಿಗೆ ಮಾನ್ಯ ಮುಖ್ಯ ಮಂತ್ರಿಯವರಿಂದ ಅಭಿನಂದನೆ ಹಾಸನ,ಸೆ.10(ಕರ್ನಾಟಕ ವಾರ್ತೆ):- ಕೋವಿಡ್ ಹರಡುವುದನ್ನು ನಿಯಂತ್ರಿಸಲು ಹೆಚ್ಚು ಆಸಕ್ತಿವಹಿಸಿ ಶಕ್ತಿಮೀರಿ ಶ್ರಮಿಸುತ್ತಿರುವ ರಾಜ್ಯದ ಪ್ರತಿಯೊಂದು ಜಿಲ್ಲೆಯ ಅಧಿಕಾರಿಗಳಿಗೆ ಮಾನ್ಯ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು ಕೋವಿಡ್ ನಿರ್ವಹಣೆಯನ್ನು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ನಿಗಾವಹಿಸಿ ಪರಿಣಾಮಕಾರಿಯಾಗಿ ನಿಭಾಯಿಸುವುದರ ಮೂಲಕ ಮರಣ ಸಂಖ್ಯೆಯನ್ನು ಕಡಿಮೆ ಮಾಡಬೇಕು ಎಂದರು. ಮಳೆಯಿಂದ ನಷ್ಟವಾಗಿರುವ ಬೆಳೆ, ರಸ್ತೆ ಮತ್ತು ಸೇತುವೆಗಳು, ಮನೆಗಳು ಕುರಿತು ಮಾಹಿತಿ ಪಡೆದ ಮುಖ್ಯ ಮಂತ್ರಿಯವರು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಹಾಳಾಗಿರುವ ರಸ್ತೆ ಮತ್ತು ಸೇತುವೆಗಳನ್ನು ತಾತ್ಕಾಲಿಕವಾಗಿ ದುರಸ್ಥಿಪಡಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗುವುದನ್ನು ಕಾಯದೆ, ಜಿಲ್ಲೆಗಳಿಗೆ ಅಗತ್ಯವಿರುವ ಹಣವನ್ನು ರಾಜ್ಯ ಸರ್...
News/information/advertising/entertainment