ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

#ಹಾಸನ ಜಿಲ್ಲೆಯ ಕೋವಿಡ್ 19 ವರದಿ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಹಾಸನ ಜಿಲ್ಲೆಯ ಕೋವಿಡ್ -19 ವರದಿ. 01/09/2020.

ಜಿಲ್ಲೆಯಲ್ಲಿಂದು ಹೊಸದಾಗಿ 461 ಜನರಿಗೆ ಕೊರೋನಾ ಸೋಂಕು ದೃಢ ಹಾಸನ,ಸೆ.1(ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿಂದು 11 ಜನ ಕೊರೋನಾ ಸೋಂಕಿನಿಂದ ಮೃತರಾಗಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 200ಕ್ಕೆ ಏರಿಕೆಯಾಗಿದೆ. ಹೊಸದಾಗಿ 461 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 8,486ಕ್ಕೆ ಏರಿಕೆಯಾಗಿದೆ. ಜಿಲ್ಲಾಸ್ಪತ್ರೆಯಲ್ಲಿ 2748 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ 5538 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 51 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇಂದು ಪತ್ತೆಯಾದ 461 ಕೊರೋನಾ ಸೋಂಕು ಪ್ರಕರಣಗಳಲ್ಲಿ 41 ಮಂದಿ ಅರಸೀಕೆರೆ ತಾಲ್ಲೂಕಿನವರಾಗಿದ್ದು, 42 ಮಂದಿ  ಚನ್ನರಾಯಪಟ್ಟಣ ತಾಲ್ಲೂಕಿನವರು, ಆಲೂರು ತಾಲ್ಲೂಕಿನಲ್ಲಿ 21 ಜನ, 275 ಮಂದಿ ಹಾಸನ ತಾಲ್ಲೂಕು, 18 ಜನ ಹೊಳೆನರಸೀಪುರ ತಾಲ್ಲೂಕು, 8 ಜನ ಅರಕಲಗೂಡು ತಾಲ್ಲೂಕು, ಬೇಲೂರು ತಾಲ್ಲೂಕಿನ 47 ಜನ, ಸಕಲೇಶಪುರ ತಾಲ್ಲೂಕಿನ 6 ಜನರಿಗೆ ಹಾಗೂ ಹೊರ ಜಿಲ್ಲೆಯ 3 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.