ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

#covid-19 updates -hassan #ಹಾಸನ ಜಿಲ್ಲೆಯ ಕೋವಿಡ್ -19 ವರದಿ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಹಾಸನ ಜಿಲ್ಲೆಯ ಕೋವಿಡ್ -19 ವರದಿ. 26/09/2020

vimarsha.in ಹಾಸನ,ಸೆ.26 (ಕರ್ನಾಟಕ ವಾರ್ತೆ):-  ಜಿಲ್ಲೆಯಲ್ಲಿಂದು 3 ಜನ ಕೊರೋನಾ ಸೋಂಕಿನಿಂದ ಮೃತರಾಗಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 300ಕ್ಕೆ ಏರಿಕೆಯಾಗಿದೆ. ಹೊಸದಾಗಿ 229 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 15,144ಕ್ಕೆ ಏರಿಕೆಯಾಗಿದೆ. ಜಿಲ್ಲಾಸ್ಪತ್ರೆಯಲ್ಲಿ 2,489 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ 12,355ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 51 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇಂದು ಪತ್ತೆಯಾದ 229 ಕೊರೋನಾ ಸೋಂಕು ಪ್ರಕರಣಗಳಲ್ಲಿ 25 ಮಂದಿ ಅರಸೀಕೆರೆ ತಾಲ್ಲೂಕಿನವರಾಗಿದ್ದು, 62 ಮಂದಿ  ಚನ್ನರಾಯಪಟ್ಟಣ ತಾಲ್ಲೂಕಿನವರು, ಆಲೂರು ತಾಲ್ಲೂಕಿನಲ್ಲಿ 12 ಜನ, 96 ಮಂದಿ ಹಾಸನ ತಾಲ್ಲೂಕು, 5 ಜನ ಹೊಳೆನರಸೀಪುರ ತಾಲ್ಲೂಕು, 13 ಮಂದಿ ಅರಕಲಗೂಡು ತಾಲ್ಲೂಕು, ಬೇಲೂರು ತಾಲ್ಲೂಕಿನ 6 ಜನ, ಸಕಲೇಶಪುರ ತಾಲ್ಲೂಕಿನಲ್ಲಿ 9 ಮಂದಿಗೆ ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ತಿಳಿಸಿದ್ದಾರೆ. *********